ಭಾನುವಾರ, ಮೇ 9, 2021
18 °C

ದಕ್ಷತೆಯಿಂದ ಕಾರ್ಯನಿರ್ವಹಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸೋಮವಾರಪೇಟೆ: ಸರ್ಕಾರದ ಯೋಜನೆಗಳು ಜನಸಾಮಾನ್ಯರಿಗೆ ತಲು ಪಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಳು ದಕ್ಷತೆಯಿಂದ ಕೆಲಸ ಮಾಡಬೇಕು ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ವಿ.ಕೆ.ಲೋಕೇಶ್ ಹೇಳಿದರು.ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಗ್ರಾಮ ಪಂಚಾಯಿತಿ ಪ್ರಗತಿ ಪರಿ ಶೀಲನಾ ಸಭೆಯಲ್ಲಿ ಅವರು ಮಾತ ನಾಡಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಬರುವ ಕೆಲಸಗಳಲ್ಲಿ ವಿಳಂಬ ಧೋರಣೆ ಅನು ಸರಿಸಿದರೆ ಸರ್ಕಾರದಿಂದ ಬಿಡುಗಡೆ ಯಾಗಿರುವ ಹಣ ಪ್ರಯೋಜನಕ್ಕೆ ಬರು ವುದಿಲ್ಲ. ಗ್ರಾಮಸಭೆ ಮತ್ತು ವಾರ್ಡ್‌ಸಭೆಗಳನ್ನು ನಿಗದಿತ ಸಮಯದಲ್ಲಿ ನಡೆಸಿದರೆ ಮಾತ್ರ ಅವಶ್ಯವಿರುವ ಕಾಮಗಾರಿಗಳುನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದರು.ಕಳೆದ ಏಪ್ರಿಲ್‌ನಿಂದ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ 3ಕೋಟಿ ರೂಪಾಯಿ ಬಿಡುಗಡೆಯಾಗಿದ್ದು, ಇದರಲ್ಲಿ 1.95 ಕೋಟಿ ರೂಪಾಯಿಗಳ ಕಾಮಗಾರಿಗಳು ಪ್ರಗತಿಯಲ್ಲಿದೆ. ಬಸವ  ವಸತಿ ಯೋಜನೆ ಯಲ್ಲಿ 1700 ಮನೆಗಳು ಹಾಗೂ ಇಂದಿರಾ ಆವಾಸ್ ಯೋಜನೆಯಲ್ಲಿ 400 ಮನೆಗಳ ನಿರ್ಮಾಣಗೊಳ್ಳುತ್ತಿವೆ ಎಂದು ಮಾಹಿತಿ ನೀಡಿದರು.ತಾಲ್ಲೂಕಿನ 40  ಗ್ರಾಮ ಪಂಚಾಯಿತಿಗಳಲ್ಲಿ  ಶೇ.45 ರಿಂದ 50ರಷ್ಟು ತೆರಿಗೆ ಸಂಗ್ರಹ ಮಾಡ ಲಾಗಿದೆ. ಶೇ.50ರಷ್ಟು ಪಡಿತರ ಚೀಟಿ ಪರಿಷ್ಕರಣೆ ಕಾರ್ಯ ಮುಗಿದಿದೆ. ಬಾಕಿಯಾಗಿರುವ ಯೋಜನಾ ಕಾಮಗಾರಿಗಳ ಕಾರ್ಯ ವನ್ನು ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ತಾಲ್ಲೂಕು ಪಂಚಾಯಿತಿ ಇಓ  ಜಿ.ಎನ್.ನಾಗರಾಜ್ ಅವರು  ವಿವಿಧ ಪಂಚಾಯಿತಿಗಳ ಅಭಿವೃದ್ಧಿ ಕಾಮಗಾರಿಗಳ  ಪರಿಶೀಲನೆ ಮಾಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.