ಮಂಗಳವಾರ, ಜೂನ್ 22, 2021
23 °C

ದಕ್ಷಿಣ ಒಳನಾಡಿನಲ್ಲಿ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭಾನುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ.



ಇಂಡಿಯಲ್ಲಿ 7 ಸೆಂ.ಮೀ. ಮಳೆಯಾಗಿದೆ. ಝಳಕಿ 6, ಕೂಕನೂರು 5, ಸವಣೂರು, ಭಾಲ್ಕಿ 4, ಜಮಖಂಡಿ, ಹುಮನಾಬಾದ್‌ 3, ಗದಗ, ಶಿರಹಟ್ಟಿ, ಮುಂಡರಗಿ, ಬೀದರ್‌, ಭದ್ರಾವತಿ 2, ಅಥಣಿ, ಧಾರವಾಡ, ಹಿರೇಕೆರೂರು, ಬಾದಾಮಿ, ಗುಳೇದಗುಡ್ಡ, ಔರಾದ್‌, ಮಸ್ಕಿ, ಶಿಕಾರಿಪುರ, ಚಿಕ್ಕನಹಳ್ಳಿಯಲ್ಲಿ ತಲಾ 1 ಸೆಂ.ಮೀ.ಮಳೆಯಾಗಿದೆ.



ಗುಲ್ಬರ್ಗದಲ್ಲಿ ಗರಿಷ್ಠ ಉಷ್ಣಾಂಶ 32.9  ಡಿಗ್ರಿ ಸೆಲ್ಸಿಯಸ್‌ ಮತ್ತು ಬೀದರ್‌ನಲ್ಲಿ ಕನಿಷ್ಠ ಉಷ್ಣಾಂಶ 14 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.