ಶುಕ್ರವಾರ, ಮಾರ್ಚ್ 5, 2021
23 °C

ದಕ್ಷಿಣ ಕನ್ನಡ: ಬಿಜೆಪಿಯ ನಳಿನ್‌ ಕುಮಾರ್‌ ಕಟೀಲು ಗೆಲುವು ಖಚಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಕ್ಷಿಣ ಕನ್ನಡ: ಬಿಜೆಪಿಯ ನಳಿನ್‌ ಕುಮಾರ್‌ ಕಟೀಲು ಗೆಲುವು ಖಚಿತ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ನಳೀನ್‌ ಕುಮಾರ್‌ ಕಟೀಲ್‌ ಅವರು ಗೆಲುವು ಸಾಧಿಸುವುದು ಖಚಿತವಾಗಿದೆ.

15 ಸುತ್ತುಗಳ ಮತ ಎಣಿಕೆ ನಡೆದಿದ್ದು 5 ಲಕ್ಷ 45 ಸಾವಿರಕ್ಕೂ ಅಧಿಕ ಮತಗಳನ್ನು ಗಳಿಸಿರುವ ನಳಿನ್‌ ಕುಮಾರ್‌ ಕಟೀಲ್‌, ತಮ್ಮ ಹತ್ತಿರದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಜನಾರ್ದನ ಪೂಜಾರಿ ಅವರಿಗಿಂತ ಸುಮಾರು 1.35 ಲಕ್ಷ ಮತಗಳಿಗಿಂತ ಮುನ್ನಡೆ ಸಾಧಿಸಿದ್ದಾರೆ. ಆರಂಭದ ಸುತ್ತಿನಿಂದಲೂ ಮುನ್ನಡೆ ಕಾಯ್ದುಕೊಂಡಿರುವ ನಳಿನ್‌ ಕುಮಾರ್‌ ಗೆಲುವಿನತ್ತ ದಾಪುಗಾಲು ಹಾಕಿದ್ದಾರೆ.ಇನ್ನು ಮೂರು ಸುತ್ತುಗಳ ಮತ ಎಣಿಕೆ ಕಾರ್ಯ ಮಾತ್ರ ಬಾಕಿ ಉಳಿದಿದ್ದು, ಬಿಜೆಪಿ ಅಭ್ಯರ್ಥಿಯ ಗೆಲುವು ನಿಚ್ಚಳವಾಗಿರುವ ಹಿನ್ನೆಲೆಯಲ್ಲಿ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.