ಶುಕ್ರವಾರ, ನವೆಂಬರ್ 15, 2019
22 °C

ದತ್ ಅರ್ಜಿ ಇಂದು ವಿಚಾರಣೆ

Published:
Updated:

ನವದೆಹಲಿ (ಐಎಎನ್‌ಎಸ್): ಶರಣಾಗತಿಗೆ ಆರು ತಿಂಗಳ ಕಾಲಾವಕಾಶ  ನೀಡಬೇಕು ಎಂದು ಕೋರಿ ನಟ ಸಂಜಯ್ ದತ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಬುಧವಾರಕ್ಕೆ ಮುಂದೂಡಿದೆ.1993ರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿದ ನ್ಯಾಯಪೀಠವೇ ಈ ಅರ್ಜಿಯ ವಿಚಾರಣೆ ನಡೆಸಲಿದೆ ಎಂದು ನ್ಯಾಯಮೂರ್ತಿ ಪಿ.ಸದಾಶಿವಂ ಅವರನ್ನೊಳಗೊಂಡ ಪೀಠ ಹೇಳಿದೆ.

ಟಾಡಾ ನ್ಯಾಯಾಲಯ ತಮಗೆ ನೀಡಿರುವ ಶಿಕ್ಷೆಯನ್ನು ಪ್ರಶ್ನಿಸಿ ದತ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯ    ಮೂರ್ತಿಗಳಾದ ಪಿ.ಸದಾಶಿವಂ ಮತ್ತು ಬಿ.ಎಸ್. ಚೌಹಾಣ್ ಅವರನ್ನೊಳಗೊಂಡ ನ್ಯಾಯಪೀಠ ನಡೆಸಿತ್ತು.

ಪ್ರತಿಕ್ರಿಯಿಸಿ (+)