ಬುಧವಾರ, ಮೇ 18, 2022
21 °C

ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪತ್ನಿ ವಿಜಯಲಕ್ಷ್ಮಿ ಹಾಗೂ ಮಗ ವಿನೀಶ್ ಮೇಲೆ ತೀವ್ರ ಹಲ್ಲೆ ನಡೆಸಿರುವ ಆರೋಪಕ್ಕೆ ಗುರಿಯಾಗಿರುವ ಚಿತ್ರನಟ ದರ್ಶನ್ ಅವರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಶುಕ್ರವಾರಕ್ಕೆ (ಅ.7) ಮುಂದೂಡಿದೆ.ಜಾಮೀನು ಕೋರಿಕೆಗೆ ಸಲ್ಲಿಸಿರುವ ಅರ್ಜಿಗೆ ಸರ್ಕಾರದ ಪರ ವಕೀಲರು ಆಕ್ಷೇಪಣೆ ಸಲ್ಲಿಸದ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಬಿ.ವಿ.ಪಿಂಟೊ ವಿಚಾರಣೆಯನ್ನು ಮುಂದೂಡಿದರು.  ಹೈಕೋರ್ಟ್, ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿ ಕಳೆದ ಬಾರಿ ಆದೇಶಿಸಿತ್ತು.ಈ ಕಾಲಾವಕಾಶವು ಶುಕ್ರವಾರಕ್ಕೆ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ಅಂದು ಆಕ್ಷೇಪಣೆ ಸಲ್ಲಿಸುವುದಾಗಿ ವಕೀಲರು ತಿಳಿಸಿದರು. ಈ ಹಿನ್ನೆಲೆಯಲ್ಲಿ ದರ್ಶನ್ ದಸರಾ ಹಬ್ಬವನ್ನು ಜೈಲಿನಲ್ಲಿಯೇ ಕಳೆಯುವಂತಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.