ಮಂಗಳವಾರ, ಮೇ 11, 2021
25 °C

ದರ್ಶನ್ ಪತ್ನಿಗೆ ಸಾಧ್ಯವಾಗದ ಡಿಸಿಪಿ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ನಗರದ ಪಶ್ಚಿಮ ವಿಭಾಗದ ಡಿಸಿಪಿ ಕಚೇರಿಗೆ ಶನಿವಾರ ಬಂದಿದ್ದರು.ಡಿಸಿಪಿ ಎಸ್.ಎನ್.ಸಿದ್ದರಾಮಪ್ಪ ಅವರನ್ನು ಭೇಟಿ ಮಾಡಬೇಕೆಂದು ಅವರು ಮನವಿ ಮಾಡಿದರು. ಆದರೆ ಡಿಸಿಪಿ ಅವರು ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿದ್ದರಿಂದ ಭೇಟಿಯಾಗಿಲ್ಲ. ಸೋಮವಾರ ಅವರು ಭೇಟಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.`ವಿಜಯಲಕ್ಷ್ಮಿ ಅವರು ಕಚೇರಿಗೆ ಬಂದಿದ್ದು ನಿಜ, ಸಭೆಯಲ್ಲಿ ಇದ್ದುದರಿಂದ ಅವರನ್ನು ಭೇಟಿ ಮಾಡಲು ಆಗಲಿಲ್ಲ. ಅವರು ಯಾವ ಕಾರಣಕ್ಕೆ ಬಂದಿದ್ದರು ಎಂದು ಗೊತ್ತಿಲ್ಲ~ ಎಂದು ಸಿದ್ದರಾಮಪ್ಪ `ಪ್ರಜಾವಾಣಿ~ಗೆ ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.