`ದಲಿತರ ಏಳಿಗೆಗೆ ಶ್ರಮಿಸುವವರಿಗೆ ಬೆಂಬಲ'

7

`ದಲಿತರ ಏಳಿಗೆಗೆ ಶ್ರಮಿಸುವವರಿಗೆ ಬೆಂಬಲ'

Published:
Updated:

ಬೆಂಗಳೂರು: `ದಲಿತರು, ಆದಿವಾಸಿಗಳು ಮತ್ತು ಅಲ್ಪಸಂಖ್ಯಾತರ ಏಳಿಗೆಗೆ ಶ್ರಮಿಸುವ ರಾಜಕೀಯ ಪಕ್ಷಗಳಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬೆಂಬಲ ನಿಡಲಾಗುವುದು' ಎಂದು ದಲಿತ ಪಂಚಾಯಿತಿ ಆಂದೋಲನದ ಸದಸ್ಯ ಸುಂದರ್‌ರಾಜ್ ಅವರು ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಎಲ್ಲಾ ರಾಜಕೀಯ ಪಕ್ಷಗಳು ಚುನಾವಣಾ ಪ್ರಣಾಳಿಕೆಯಲ್ಲಿ ಶತಮಾನಗಳಿಂದ ಸಮಾಜದಲ್ಲಿ ಶೋಷಣೆಗೆ ಒಳಗಾಗಿರುವ ದಲಿತ, ಆದಿವಾಸಿಗಳ ಹಾಗೂ ಅಲ್ಪಸಂಖ್ಯಾತರ ಏಳಿಗೆಗೆ ಅವರು ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗುವಂತೆ ಪ್ರತಿ ಕುಟುಂಬಕ್ಕೆ ಐದು ಎಕರೆ ಭೂಮಿ ನೀಡಬೇಕು ಎಂದರು.ಚುನಾವಣಾ ಪ್ರಣಾಳಿಕೆಯಲ್ಲಿ ಈ ಅಂಶಗಳನ್ನು ಪ್ರಕಟಿಸಿ ಅಧಿಕಾರಕ್ಕೆ ಬಂದ ನಂತರ ಜಾರಿಗೊಳಿಸುವ ಭರವಸೆ ನೀಡುವ ರಾಜಕೀಯ ಪಕ್ಷಗಳಿಗೆ ದಲಿತ ಪಂಚಾಯಿತಿ ಆಂದೋಲನವು ಬೆಂಬಲ ನೀಡಲಿದೆ ಎಂದು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry