ಭಾನುವಾರ, ಮೇ 9, 2021
25 °C

ದಲಿತರ ನೇಮಕಕ್ಕೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ರಾಷ್ಟ್ರೀಯ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕರಿಯಾ ಮುಂಡಾ ನೀಡಿದ ವರದಿ ಪ್ರಕಾರ ದೇಶದ ಎಲ್ಲಾ ರಾಜ್ಯಗಳಲ್ಲಿ ಎರಡು ಹೆಚ್ಚುವರಿ ಅಡ್ವೊಕೇಟ್ ಜನರಲ್ ಹುದ್ದೆಗಳನ್ನು ಸೃಷ್ಟಿಸಿ, ಅದರಲ್ಲಿ ಒಂದು ಸ್ಥಾನಕ್ಕೆ ದಲಿತ ಸಮುದಾಯದವರನ್ನು ನೇಮಕ ಮಾಡುವಂತೆ ಕರ್ನಾಟಕ ಜನಾಂದೋಲನ ಸಂಘಟನೆ ಹಾಗೂ ಜಾತಿ ವಿನಾಶ ವೇದಿಕೆ ಆಗ್ರಹಿಸಿವೆ.ಬುಧವಾರ ಜಂಟಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ವೇದಿಕೆ ಅಧ್ಯಕ್ಷ ಲಕ್ಷ್ಮಣ್,  ಕೆಲ ಪ್ರಕರಣಗಳಲ್ಲಿ ಸಾಕ್ಷಿಗಳ ಕೊರತೆಯಿಂದಾಗಿ ದಲಿತ ರಿಗೆ ನ್ಯಾಯ ದೊರೆತಿಲ್ಲ. ಇನ್ನೂ ಕೆಲ ಪ್ರಕರಣಗಳು ಬಹಳ ವರ್ಷಗಳಿಂದ ಹಾಗೇ ಉಳಿದಿವೆ. ಈ ಹಿನ್ನೆಲೆಯಲ್ಲಿ  ರಾಜ್ಯದಲ್ಲೂ ಎರಡು ಹೆಚ್ಚುವರಿ ಅಡ್ವೊಕೇಟ್ ಜನರಲ್ ಹುದ್ದೆ ಸೃಷ್ಟಿಸಬೇಕು ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.