ಸೋಮವಾರ, ಜೂನ್ 21, 2021
29 °C

ದಲಿತರ ಮೇಲಿನ ದೌರ್ಜನ್ಯ: ಕ್ರಮಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಳ್ಳಕೆರೆ: ತಾಲ್ಲೂಕಿನ ದೊಡ್ಡಬೀರನ ಹಳ್ಳಿಯಲ್ಲಿ ದಲಿತರ ಮೇಲೆ ನಡೆದ ದೌರ್ಜನ್ಯ ಹಾಗೂ ಜಾತಿ ನಿಂದನೆ ಖಂಡಿಸಿ ವಿವಿಧ ದಲಿತಪರ ಸಂಘಟನೆಗಳ ಕಾರ್ಯಕರ್ತರು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ಬುಧವಾರ ಧರಣಿ ನಡೆಸಿದ ಪ್ರತಿಭಟನಾಕಾರರು ತಪ್ಪಿತಸ್ಥರನ್ನು ಬಂಧಿಸಿ, ದೌರ್ಜನ್ಯಕ್ಕೆ ಒಳಗಾದವರಿಗೆ ನ್ಯಾಯ ಒದಗಿಸಿ ಕೊಡಬೇಕು ಎಂದು ಒತ್ತಾಯಿಸಿದರು.ದೊಡ್ಡಬೀರನಹಳ್ಳಿ ಗ್ರಾಮದ ಟಿ.ಪಿ.ದೇವರಾಜ, ಪ್ರಕಾಶ, ನಾಗರಾಜ ಎನ್ನುವವರು ದಲಿತ ಸಮುದಾಯಕ್ಕೆ ಸೇರಿದ ಗ್ರಾಮ ಪಂಚಾಯ್ತಿ ಸದಸ್ಯ ಡಿ.ನಾಗರಾಜ, ರತ್ನಮ್ಮ, ಪೂಜಾರಿ ತಿಪ್ಪೇಸ್ವಾಮಿ, ತಿಮ್ಮಣ್ಣ, ಮಹಾಂತೇಶ್ ಅವರ ಮೇಲೆ ಜಾತಿ ನಿಂದನೆ ಮಾಡಿ  ದೌರ್ಜನ್ಯ ನಡೆಸಿದ್ದಾರೆ. ಕೂಲಿ ಕೆಲಸಕ್ಕೆ ಹೋಗಲಿಲ್ಲ ಎನ್ನುವ ಕಾರಣಕ್ಕೆ ರತ್ನಮ್ಮಳ ಮೇಲೆ ಹಲ್ಲೆ ನಡೆಸಲಾಗಿದೆ. ಹಲ್ಲೆ ನಡೆಯುವಾಗ ಬಿಡಿಸಲು ಹೋದ ಇತರರ ಮೇಲೆಯೂ ದೌರ್ಜನ್ಯ ಮಾಡಲಾಗಿದೆ.ಇತ್ತೀಚಿನ ದಿನಗಳಲ್ಲಿ ದಲಿತರು ಈ ರೀತಿ ಹಲವು ಬಾರಿ ದೌರ್ಜನ್ಯಗಳಿಗೆ ಒಳಗಾಗಿದ್ದಾರೆ.  ಇದುವರೆಗೂ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಿಲ್ಲ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಾಂತ್ವನ ಹೇಳದೇ ನಿರ್ಲಕ್ಷ್ಯ ತೋರಿದ್ದಾರೆ ಎಂದು ಪ್ರತಿಭಟನಾ ಕಾರರು ದೂರಿದರು.ದೌರ್ಜನ್ಯ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ದೌರ್ಜನ್ಯಕ್ಕೆ ಒಳಗಾಗದವರಿಗೆ ಸರ್ಕಾರದ ವತಿಯಿಂದ ದೊರೆಯಬೇಕಾದ ಸೌಲಭ್ಯಗಳನ್ನು ಒದಗಿಸಿಕೊಡಬೇಕು ಎಂದು ಎಲ್ಲಾ ದಲಿತಪರ ಸಂಘಟನೆಗಳು ಆಗ್ರಹಿಸಿವೆ. ಕ್ರಮ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ತೋರಿದ್ದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಮಾಡಲಾಗುವುದು ಎಂದು ಅವರು ಎಚ್ಚರಿಸಿದರು.ಪುರಸಭೆ ಉಪಾಧ್ಯಕ್ಷ ಟಿ.ವಿಜಯ ಕುಮಾರ್, ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಕೆ.ಬಿ.ನಾಗರಾಜ, ಉಪಾಧ್ಯಕ್ಷ ಎಚ್.ತಿಮ್ಮಪ್ಪ, ಪ್ರಧಾನ ಕಾರ್ಯದರ್ಶಿ ಎನ್.ತಿಪ್ಪೇರುದ್ರಪ್ಪ, ಕಾರ್ಯದರ್ಶಿ ಹೊನ್ನೂರಸ್ವಾಮಿ, ಕೃಷ್ಣಮೂರ್ತಿ, ಶಿವಮೂರ್ತಿ ಹಾಗೂ ದಸಂಸ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.