ಶನಿವಾರ, ಮೇ 15, 2021
24 °C

ದಲಿತರ ಮೇಲೆ ದೌರ್ಜನ್ಯ ಆರೋಪ: ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಲಬುರ್ಗಾ: ತಾಲ್ಲೂಕಿನ ಮುರಡಿ, ತೊಂಡಿಹಾಳ, ಕೊಪ್ಪಳದ ಅಲ್ಲಾನಗರ ಹಾಗೂ ಇನ್ನಿತರ ಗ್ರಾಮಗಳಲ್ಲಿ ದಲಿತರ ಮೇಲೆ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿ ಸೋಮವಾರ ಮಾದಿಗ ದಂಡೋರ ಹೋರಾಟ ಸಮಿತಿ ಪ್ರತಿಭಟನೆ ನಡೆಸಿತು.ಪಟ್ಟಣದ ವಿವಿಧ ಬೀದಿಗಳಲ್ಲಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದರು. ಕಿತ್ತೂರು ಚೆನ್ನಮ್ಮ ವೃತ್ತದ ಬಳಿ ಸಾರ್ವಜನಿಕರನ್ನುದ್ದೇಶಿ ದಲಿತ ಸಂಘರ್ಷ ಸಮಿತಿ ತಾಲ್ಲೂಕು ಸಂಚಾಲಕ ರುದ್ರಪ್ಪ ನಡುಲಮನಿ ಮಾತನಾಡಿ ಅಸ್ಪೃಶ್ಯತೆ ನಿವಾರಣೆಯಲ್ಲಿ ತಾಲ್ಲೂಕು ಆಡಳಿತ ಸಂಪೂರ್ಣ ವಿಫಲವಾಗಿದ್ದರಿಂದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು.ದೌರ್ಜನ್ಯಕ್ಕೆ ಒಳಗಾದ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಹಾಗೂ 2 ಎಕರೆ ಭೂಮಿ ಮಂಜೂರು ಮಾಡಬೇಕು. ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿನ ದಲಿತ ಕಾಲೋನಿಗಳಿಗೆ ಮೂಲ ಸೌಲಭ್ಯ ಕಲ್ಪಿಸುವುದು. ದೌರ್ಜನ್ಯ ಎಸಗಿದವರಿಗೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಯಾವ ಜನಾಂಗಕ್ಕೂ ಅನ್ಯಾಯವಾಗದಂತೆ ಸರ್ಕಾರ ಜಾಗೃತಿ ವಹಿಸುತ್ತದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮನವಿ ಸ್ವೀಕರಿಸಿದ ತಹಶೀಲ್ದಾರ್ ಎಂ.ಬಿ.ಬಿರಾದಾರ ಭರವಸೆ ನೀಡಿದರು.ಮಿಶ್ರಪ್ರತಿಕ್ರಿಯೆ: ಈ ವಿಷಯಕ್ಕೆ ಸಂಬಂಧಿಸಿದಂತೆ ದಲಿತ ಸಂಘಟನೆಗಳು ಸೋಮವಾರ ಕರೆದ್ದ್ದಿದ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರಮುಖ ರಸ್ತೆಬದಿಯ ಅಂಗಡಿ ಮುಗ್ಗಟ್ಟುಗಳು ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲಿಸಿದರೆ. ಕಾಲೊನಿಯಲ್ಲಿನ ಬಹುತೇಕ ಅಂಗಡಿಗಳು ತೆರೆದಿದ್ದವು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.