ಶನಿವಾರ, ಜೂನ್ 19, 2021
27 °C

ದಲಿತರ ಹಕ್ಕು ರಕ್ಷಿಸಲು ಒತ್ತಾಯಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ದಲಿತರ ಹಕ್ಕುಗಳನ್ನು ರಕ್ಷಿಸುವುದು ಮತ್ತು ಅವರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ನಲ್ಲಿ ಹಣ ಮೀಸಲಿಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ), ದಲಿತ ಹಕ್ಕುಗಳ ಹೋರಾಟ ಸಮಿತಿ ಸದಸ್ಯರು ಬುಧವಾರ ಪ್ರತಿಭಟನೆ ನಡೆಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕೆಲವೊತ್ತು ಧರಣಿ ನಡೆಸಿದ ಪ್ರತಿಭಟನಾಕಾರರು ನಂತರ ಈ ಸಂಬಂಧ ಮನವಿಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗೆ ಸಲ್ಲಿಸಿದರು.ದಲಿತರ ಎಸ್‌ಸಿಪಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಕೇಂದ್ರ ಶಾಸನವನ್ನು ಜಾರಿಗೆ ತರಬೇಕು; ಪರಿಶಿಷ್ಟರಿಗೆ ಸಂಬಂಧಪಟ್ಟ ವಿಷಯ ಹಾಗೂ ಸಮಸ್ಯೆಗಳನ್ನು ಚರ್ಚಿಸುವ ಸಲುವಾಗಿಯೇ ವಿಶೇಷ ಅಧಿವೇಶನ ವನ್ನು ಕರೆಯಬೇಕು ಎಂದು ಆಗ್ರಹಿಸಿದರು.ಭೂ ರಹಿತ ದಲಿತ ಕುಟುಂಬಗಳಿಗೆ ಭೂಮಿಯನ್ನು ನೀಡುವುದು; ಎಲ್ಲಾ ದಲಿತ ಕುಟುಂಬಗಳಿಗೂ ಅಂತ್ಯೋ ದಯ ಕಾರ್ಡ್ ನೀಡಬೇಕು; ದೇವದಾಸಿ ಮಹಿಳೆಯರಿಗೆ ಮಾಸಿಕ ಸಹಾಯಧನವನ್ನು ರೂ. 1000 ಸಾವಿರಕ್ಕೆ ಹೆಚ್ಚಿಸಬೇಕು ಎಂಬುದು ಸೇರಿದಂತೆ ಒಟ್ಟು ಹದಿನೇಳು ಬೇಡಿಕೆಗಳನ್ನು ಉಲ್ಲೇಖಿಸಿದ್ದಾರೆ.ಸಿಪಿಐ(ಎಂ)ನ ಎಂ.ಪುಟ್ಟಮಾದು, ಟಿ.ಎಲ್. ಕೃಷ್ಣೇಗೌಡ, ಬಸವರಾಜು, ಜನವಾದಿ ಮಹಿಳಾ ಸಂಘಟನೆಯ ಸಿ.ಕುಮಾರಿ ಸೇರಿದಂತೆ ಹಲವರು ಭಾಗವಹಿಸಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.