ದಲಿತ ಬಾಲಕಿ ಮೇಲೆ ಹಲ್ಲೆ ಪ್ರಕರಣ:

7

ದಲಿತ ಬಾಲಕಿ ಮೇಲೆ ಹಲ್ಲೆ ಪ್ರಕರಣ:

Published:
Updated:

ಬೆಂಗಳೂರು: ಜೋಳದ ತೆನೆ ಕಿತ್ತ ಆರೋಪದ ಮೇಲೆ ದಲಿತ ಬಾಲಕಿಯೊಬ್ಬಳನ್ನು ಥಳಿಸಿದ ಪ್ರಕರಣ ಕುರಿತು ಸಮಗ್ರ ವರದಿ ನೀಡುವಂತೆ ವಿಜಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ವಿಧಾನಸಭೆಗೆ ತಿಳಿಸಿದರು.ಕಾಂಗ್ರೆಸ್‌ನ ವಿ.ಶ್ರೀನಿವಾಸ ಪ್ರಸಾದ್ ವಿಷಯ ಪ್ರಸ್ತಾಪಿಸಿ ವಿಜಾಪುರ ಜಿಲ್ಲೆಯ ಸಿಂಧಗಿ ತಾಲ್ಲೂಕಿನಲ್ಲಿ ಅಮಾನವೀಯ ಘಟನೆ ನಡೆದಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.ಇದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸದಾನಂದ ಗೌಡ ಅವರು `ಪ್ರಕರಣ ಕುರಿತು ವರದಿ ನೀಡುವಂತೆ ಎಸ್ಪಿಗೆ ಸೂಚಿಸಿದ್ದು, ವರದಿ ಬಂದ ನಂತರ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು~ ಎಂದರು.

`ದಲಿತರ ಮೇಲಿನ ದೌರ್ಜನ್ಯವನ್ನು ಸರ್ಕಾರ ಸಹಿಸುವುದಿಲ್ಲ. ಅದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ~ ಎಂದೂ ಅವರು ತಿಳಿಸಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry