ದಲಿತ ಸಂಘಟನೆಗಳ ಧರಣಿ

ಗುರುವಾರ , ಜೂಲೈ 18, 2019
26 °C

ದಲಿತ ಸಂಘಟನೆಗಳ ಧರಣಿ

Published:
Updated:

ತುಮಕೂರು: ದಲಿತರ ಮೇಲೆ ದೌರ್ಜನ್ಯ ಎಸಗಿದವರ ಮೇಲೆ ಕ್ರಮ ಜರುಗಿಸುವಲ್ಲಿ ವಿಫಲರಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿ ಸಮತಾ ಸೈನಿಕ ದಳ ಹಾಗೂ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.ಟೌನ್‌ಹಾಲ್ ವೃತ್ತದಿಂದ ಡಿಸಿ ಕಚೇರಿವರೆಗೆ ಮೆರವಣಿಗೆಯಲ್ಲಿ ಸಾಗಿದ 2 ಸಂಘಟನೆಗಳ ಕಾರ್ಯರ್ತರು, ಜಿಲ್ಲಾಧಿಕಾರಿಗೆ ಪ್ರತ್ಯೇಕ ಮನವಿ ಸಲ್ಲಿಸಿದರು.

ಕುಣಿಗಲ್ ತಾಲ್ಲೂಕು ಕಲ್ಲನಾಯಕನಹಳ್ಳಿಯಲ್ಲಿ ಅಂಬೇಡ್ಕರ್ ಭವನ ನಿವೇಶನಕ್ಕೆ ಅಕ್ರಮ ಪ್ರವೇಶ ಮಾಡಿ, ದೌರ್ಜನ್ಯ ನಡೆಸಿದವರ ವಿರುದ್ಧ ಕ್ರಮ ಜರುಗಿಸುವಂತೆ ಸಮತಾ ಸೈನಿಕ ದಳ ಕಾರ್ಯಕರ್ತರು ಒತ್ತಾಯಿಸಿತು.ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರೂ ಕ್ರಮ ಜರುಗಿಸಿಲ್ಲ. ಇಂಥ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ ಎಂ.ವಿ.ವೆಂಕಟಸ್ವಾಮಿ ಆಗ್ರಹಿಸಿದರು.ದಸಂಸ ಪ್ರತಿಭಟನೆ: ತಾಲ್ಲೂಕಿನ ಕುಂಕಮನಹಳ್ಳಿಯಲ್ಲಿ ದಲಿತರ ಮೇಲೆ ದೌರ್ಜನ್ಯ ನಡೆಸಿದ ಸವರ್ಣೀಯರ ವಿರುದ್ಧ ಕ್ರಮ ಜರುಗಿಸುವಲ್ಲಿ ವಿಫಲರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿದರು.ಕುಂಕುಮನಹಳ್ಳಿ ದಲಿತ ಕಾಲೊನಿಗೆ ಸಿಮೆಂಟ್ ರಸ್ತೆ ನಿರ್ಮಿಸುತ್ತಿದ್ದಾಗ ಸವರ್ಣೀಯರು ಬಂದು ಕಾಮಗಾರಿ ನಿಲ್ಲಿಸಿದ್ದಾರೆ. ಅಲ್ಲದೆ ಕಾಲೊನಿಗೆ ನುಗ್ಗಿ ಮಾರಕಾಸ್ತ್ರಗಳಿಂದ ಪ್ರಾಣ ಬೆದರಿಕೆ ಹಾಕಿ, ಜಾತಿನಿಂದನೆ ಮಾಡಿದ್ದಾರೆ. ಈ ಬಗ್ಗೆ ಜಿಲ್ಲಾಡಳಿತಕ್ಕೆ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ. ದಲಿತ ವಿರೋಧಿ ನೀತಿ ಅನುಸರಿಸುತ್ತಿರುವ ಅಧಿಕಾರಿಗಳನ್ನು ಅಮಾನತು ಮಾಡಬೇಕೆಂದು ಒತ್ತಾಯಿಸಿದರು.ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಜಿಲ್ಲಾಧ್ಯಕ್ಷ ಸೋಮಶೇಖರ್, ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ಬಿ.ಶಾಂತರಾಜು, ನಗರ ಅಧ್ಯಕ್ಷ ಕೃಷ್ಣಪ್ಪ ಹೆಗ್ಗೆರೆ ಇತರರು ಭಾಗವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry