ದಲಿತ ಸಂಘರ್ಷ ಸಮಿತಿ ಪ್ರತಿಭಟನೆ
ಬೆಂಗಳೂರು: ರಾಜ್ಯದಲ್ಲಿರುವ ಆಶ್ರಮ ಶಾಲೆಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿದ್ಯಾರ್ಥಿನಿಲಯಗಳನ್ನು ಮುಚ್ಚಲು ಹೊರಟಿರುವ ಸರ್ಕಾರದ ನೀತಿಯನ್ನು ವಿರೋಧಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಸದಸ್ಯರು ಆನಂದರಾವ್ ವೃತ್ತದ ಬಳಿಯ ಮಹಾತ್ಮಾ ಗಾಂಧಿ ಪ್ರತಿಮೆಯ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಸಮಿತಿಯ ರಾಜ್ಯ ಘಟಕದ ಸಂಚಾಲಕ ಲಕ್ಷ್ಮೀನಾರಾಯಣ ನಾಗವಾರ, `ರಾಜ್ಯದಲ್ಲಿ ಬಡವರು ಹಾಗೂ ದಲಿತರ ಶಿಕ್ಷಣದ ಹಕ್ಕನ್ನು ಸರ್ಕಾರ ಕಸಿದುಕೊಳ್ಳುತ್ತಿದೆ.
ವಿದ್ಯಾರ್ಥಿಗಳ ಹಿತವನ್ನು ಕಡೆಗಣಿಸಿ ಆಶ್ರಮ ಶಾಲೆಗಳು ಹಾಗೂ ವಿದ್ಯಾರ್ಥಿನಿಲಯಗಳನ್ನು ಮುಚ್ಚಲು ಸರ್ಕಾರ ಮುಂದಾಗಿದೆ. ಇದರಿಂದ ದಲಿತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗುತ್ತದೆ. ಕೂಡಲೇ ಸರ್ಕಾರ ತನ್ನ ನಿರ್ಧಾರವನ್ನು ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
`ದಲಿತರ ಸಮಸ್ಯೆಗಳಿಗೆ ಸರ್ಕಾರ ಸೂಕ್ತವಾಗಿ ಸ್ಪಂದಿಸುತ್ತಿಲ್ಲ. ಬ್ಯಾಕ್ಲಾಗ್ ಆಧಾರದಲ್ಲಿ ನೇಮಕವಾಗಿರುವ ಎಂಜಿನಿಯರ್ಗಳ ಸೇವಾ ಭದ್ರತೆಗೆ ಸರ್ಕಾರ ಮುಂದಾಗಬೇಕು ಎಂದು ಹೇಳಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.