ಸೋಮವಾರ, ಮೇ 10, 2021
21 °C

ದಸರಾ: ವಿದೇಶಿಯರಿಗೆ ವಿಶೇಷ ಪ್ಯಾಕೇಜ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: `ವಿದೇಶಿಯರಿಗೆ ಭಾರತೀಯ ಸಂಪ್ರದಾಯವನ್ನು ಪರಿಚಯಿಸುವ ದೃಷ್ಟಿಯಿಂದ ಈ ಬಾರಿ ದಸರಾ ಉತ್ಸವದಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗುತ್ತಿದೆ~ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎ. ರಾಮದಾಸ್ ಶುಕ್ರವಾರ ತಿಳಿಸಿದರು.ಎಂಜಿನಿಯರ್‌ಗಳ ಸಂಸ್ಥೆಯ ಸಭಾಂಗಣದಲ್ಲಿ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು ಏರ್ಪಡಿಸಿದ್ದ 2010 ರ ದಸರಾ ಮಹೋತ್ಸವದ ವಿದ್ಯುತ್ ಅಲಂಕಾರ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.`ವಿದೇಶಿ ಪ್ರವಾಸಿಗರಿಗಾಗಿ   ವಿಶೇಷವಾದ ಪ್ಯಾಕೇಜ್ ಸಿದ್ಧಪಡಿಸಲಾಗಿದೆ. ಇದಕ್ಕಾಗಿ ನಗರದಲ್ಲಿ 50 ಸಾಂಪ್ರದಾಯಿಕ ಮನೆಗಳನ್ನು ಗುರುತಿಸಲಾಗಿದೆ. ಅಲ್ಲಿ ವಿದೇಶಿ ಪ್ರವಾಸಿಗರಿಗೆ ನಮ್ಮ ಉಡುಗೆ, ತೊಡುಗೆ, ಆಚಾರ, ವಿಚಾರ, ಆಹಾರ, ಕುಟುಂಬ ವ್ಯವಸ್ಥೆಯ ಪರಿಚಯ ಮಾಡಿಕೊಡಲಾಗುತ್ತದೆ. ಈ ಪ್ಯಾಕೇಜ್  ದಸರಾ ಮಹೋತ್ಸವದಲ್ಲಿ ಮಾತ್ರ ಇರುತ್ತದೆ~ ಎಂದು ಹೇಳಿದರು.ವರ್ಷ ಪೂರ್ತಿ ಆಚರಣೆ: `ಮೈಸೂರು ಅರಮನೆ ನಿರ್ಮಾಣಗೊಂಡು 99ನೇ ವರ್ಷ ಪೂರ್ಣಗೊಂಡು 100 ನೇ ವರ್ಷಕ್ಕೆ ಕಾಲಿಡುತ್ತಿದೆ. ಇದರ ಅಂಗವಾಗಿ ವರ್ಷ ಪೂರ್ತಿ ವಿಶಿಷ್ಟ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಸರ್ಕಾರ ನಿರ್ಧರಿಸಿದೆ. ಅರಮನೆಯಲ್ಲಿ ವಿದ್ಯುದೀಪಾಲಂಕಾರ ಹಾಗೂ ಸರ್ಕಾರಿ ರಜೆ ದಿನಗಳಲ್ಲಿ ಅರಮನೆ ಆವರಣದಲ್ಲಿ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು~ ಎಂದು ತಿಳಿಸಿದರು.`ದೇಶ, ವಿದೇಶಗಳಲ್ಲಿ ಗಮನ ಸೆಳೆದಿರುವ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ಇಷ್ಟು ವರ್ಷ ಚಂದನ ವಾಹಿನಿಯಲ್ಲಿ ಮಾತ್ರ ಪ್ರಸಾರ ಮಾಡಲಾಗುತ್ತಿತ್ತು. ಈ ವರ್ಷದಿಂದ ರಾಷ್ಟ್ರೀಯ ವಾಹಿನಿಗಳಲ್ಲಿಯೂ ಪ್ರಸಾರ ಮಾಡಲಾಗುವುದು~ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.