ಶುಕ್ರವಾರ, ಮೇ 7, 2021
27 °C

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಂಕಿತ್ ಚವಾಣ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ (ಪಿಟಿಐ):  ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಭಾಗಿಯಾದ ಆರೋಪ ಹೊತ್ತಿರುವ ರಾಜಸ್ತಾನ ರಾಯಲ್ಸ್ ತಂಡದ ಸ್ಪಿನ್ ಬೌಲರ್ ಅಂಕಿತ್ ಚವಾಣ್ ಭಾನುವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.ಕೆಲವೇ ಪ್ರಮುಖರ ಸಮ್ಮುಖದಲ್ಲಿ ನಡೆದ ಸಮಾರಂಭದಲ್ಲಿ ಅಂಕಿತ್ ವಸ್ತ್ರ ವಿನ್ಯಾಸಗಾರ್ತಿ ನೇಹಾ ಸಂಬಾರಿ ಜೊತೆ ಬದುಕಿನ ಎರಡನೇ ಇನಿಂಗ್ಸ್ ಆರಂಭಿಸಿದರು.ಸ್ಪಾಟ್ ಫಿಕ್ಸಿಂಗ್‌ನಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಕಾರಣ ಅಂಕಿತ್ ಅವರನ್ನು ಬಿಸಿಸಿಐ ಅಮಾನತು ಮಾಡಿದೆ. ಮದುವೆ ಕಾರಣ ನ್ಯಾಯಾಲಯ ಅಂಕಿತ್‌ಗೆ ಜೂನ್ ಆರರವರೆಗೆ ಷರತ್ತು ಬದ್ಧ ಜಾಮೀನು ನೀಡಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.