ಬೆಂಗಳೂರು: ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿಯಲ್ಲಿ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದ ಮಕ್ಕಳು 2013-14ನೇ ಶೈಕ್ಷಣಿಕ ವರ್ಷದಲ್ಲಿ ವ್ಯವಸ್ಥಿತವಾಗಿ ಶಾಲೆಗೆ ದಾಖಲಾಗುವ ನಿಟ್ಟಿನಲ್ಲಿ ಪ್ರವೇಶ ದಾಖಲಾತಿ ಪ್ರಕ್ರಿಯೆ ವೇಳಾಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದೆ.

ಸಿಬಿಎಸ್ಇ, ಐಸಿಎಸ್ಇ ಪಠ್ಯಕ್ರಮ ಅನುಸರಿಸುವ ಶಾಲೆಗಳು ಸೇರಿದಂತೆ ಎಲ್ಲ ಅನುದಾನರಹಿತ ಶಾಲೆಗಳು ದುರ್ಬಲ ವರ್ಗದವರಿಗೆ ಕಡ್ಡಾಯವಾಗಿ ಶೇ 25 ಸೀಟುಗಳನ್ನು ಮೀಸಲು ಇಡಬೇಕು. ಕ್ಷೇತ್ರ ಶಿಕ್ಷಣಾಧಿಕಾರಿಗಳ ಸೂಚನೆಯನ್ನು ಪಾಲಿಸದ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಸಿದೆ.

ನಿಗದಿಪಡಿಸಿದ ದಾಖಲಾತಿ ಅರ್ಜಿ ನಮೂನೆಗಳು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗಳು, ಜಿಲ್ಲಾ ಉಪನಿರ್ದೇಶಕ ಕಚೇರಿ ಹಾಗೂ ಸಂಬಂಧಪಟ್ಟ ಶಾಲೆಗಳಲ್ಲಿಯೂ ಲಭ್ಯ ಇರುತ್ತದೆ. ಅರ್ಜಿ ನಮೂನೆಯು www.schooleducation.kar.nic.in rlfl ರಲ್ಲಿಯೂ ಲಭ್ಯ ಇರುತ್ತದೆ. ಅರ್ಜಿ ನಮೂನೆಗೆ ಶುಲ್ಕ ಇರುವುದಿಲ್ಲ. ಉಚಿತವಾಗಿ ವೆಬ್ಸೈಟ್ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು.

ಒಂದನೇ ತರಗತಿಗೆ ಅಥವಾ ಪೂರ್ವ ಪ್ರಾಥಮಿಕ ತರಗತಿಗೆ ಮಕ್ಕಳನ್ನು ದಾಖಲು ಮಾಡಿಕೊಳ್ಳಲು ನಿಗದಿಪಡಿಸಿದ ಅರ್ಜಿ ನಮೂನೆ ಎಲ್ಲ ಮಕ್ಕಳಿಗೂ ಒಂದೇ ಆಗಿರುತ್ತದೆ. ಮಕ್ಕಳಿಗೆ ದೃಢೀಕರಣ ಪತ್ರಗಳನ್ನು ನೀಡಲು ವಿವಿಧ ಅಧಿಕಾರಿಗಳನ್ನು ಸಕ್ಷಮ ಪ್ರಾಧಿಕಾರ ಎಂದು ಈಗಾಗಲೇ ನೇಮಿಸಲಾಗಿದೆ.

ಅನಾಥ ಮಗುವಿಗೆ ಕ್ಷೇತ್ರ ಶಿಕ್ಷಣಾಧಿಕಾರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ, ವಲಸೆ ಮಗುವಿಗೆ ಕ್ಷೇತ್ರ ಶಿಕ್ಷಣಾಧಿಕಾರಿ, ಸಿಡಿಪಿಒ, ಕಾರ್ಮಿಕ ಇಲಾಖೆಯ ಅಧಿಕಾರಿ, ಬೀದಿ ಮಗುವಿಗೆ ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಅಂಗವಿಕಲ ಹಾಗೂ ಎಚ್ಐವಿಪೀಡಿತ ಮಕ್ಕಳಿಗೆ ತಾಲ್ಲೂಕು ವೈದ್ಯಾಧಿಕಾರಿ ಸಕ್ಷಮ ಪ್ರಾಧಿಕಾರ ಆಗಿರುವರು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.