ಕುಷ್ಟಗಿ: ಸಮರ್ಪಕ ದಾಖಲೆಗಳಿಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ₨ 11.30 ಲಕ್ಷವನ್ನು ಪಟ್ಟಣದ ಚೆಕ್ಪೋಸ್ಟ್ನಲ್ಲಿ ಮಂಗಳವಾರ ವಶಪಡಿಸಿಕೊಂಡಿರುವ ಅಧಿಕಾರಿಗಳು, ಈ ಸಂಬಂಧ ಒಬ್ಬನನ್ನು ಬಂಧಿಸಿದ್ದಾರೆ. ತಹಶೀಲ್ದಾರ್ ಎನ್.ಬಿ.ಪಾಟೀಲ, ಸರ್ಕಲ್ ಇನ್ಸ್ಪೆಕ್ಟರ್ ಆರ್.ಎಸ್. ಉಜ್ಜನಕೊಪ್ಪ ಅವರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಈ ಹಣ ಪತ್ತೆಯಾಗಿದೆ.

ಇಲ್ಲಿನ ಪೊಲೀಸ್ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಣ ಮತ್ತು ಟಾಟಾ ಇಂಡಿಕಾ ಕಾರನ್ನು ಸ್ಥಳೀಯ ನ್ಯಾಯಾಲಯದ ವಶಕ್ಕೆ ನೀಡಲಾಗಿದೆ. ಬಂಧಿತ ಆರೋಪಿಯನ್ನು ವಿಜಾಪುರ ಮೂಲದ ಸುರೇಶ ತಡಲಗಿ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು ರಾಷ್ಟ್ರೀಯ ಹೆದ್ದಾರಿಯಲ್ಲಿ ತೆರೆದಿರುವ ಚೆಕ್ಪೋಸ್ಟ್ ಬಳಿ ತಪಾಸಣೆ ನಡೆಸಿದಾಗ ವಾಹನದಲ್ಲಿ ಹಣ ಪತ್ತೆಯಾಗಿದೆ. ಆದರೆ ಈ ಹಣ ರಾಜಕೀಯ ಪಕ್ಷ ಅಥವಾ ರಾಜಕಾರಣಿಗೆ ಸೇರಿದೆಯೇ ಎಂಬುದು ಖಚಿತವಾಗಿಲ್ಲ.

ಹಣ ತೆಗೆದುಕೊಂಡು ಹೋಗುತ್ತಿದ್ದವರು ತಾವು ವ್ಯಾಪಾರಿಗಳಾಗಿದ್ದು ಚುನಾವಣೆಗೆ ನಮಗೂ ಸಂಬಂಧವಿಲ್ಲ. ಕೊಪ್ಪಳದಲ್ಲಿನ ವರ್ತಕರಿಗೆ ಪಾವತಿಸಲು ಹಣ ತೆಗೆದುಕೊಂಡು ಹೋಗುತ್ತಿದ್ದುದಾಗಿ ವಾದಿಸಿದರು. ಆದರೆ ಯಾವುದೇ ದಾಖಲೆಗಳನ್ನು ಹಾಜರುಪಡಿಸದ ಕಾರಣ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಸರ್ಕಲ್ ಇನ್ಸ್ಪೆಕ್ಟರ್ ಆರ್.ಎಸ್.ಉಜ್ಜನಕೊಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.