ಶುಕ್ರವಾರ, ಮೇ 27, 2022
21 °C

ದಾವಣಗೆರೆಗೆ ಇಂದು ರಾಹುಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ:  ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಜೂನ್ 3ರಂದು ಬೆಳಿಗ್ಗೆ 10.30ಕ್ಕೆ ನಗರಕ್ಕೆ ಆಗಮಿಸಿ ಪಕ್ಷದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾಯಿತ ಕಾಂಗ್ರೆಸ್ ಸದಸ್ಯರೊಂದಿಗೆ ಪರಿಣಾಮಕಾರಿ ಆಡಳಿತದ ಬಗ್ಗೆ ಹಾಗೂ ಕೆಪಿಸಿಸಿ ಪದಾಧಿಕಾರಿಗಳು, ಸಂಸತ್ ಸದಸ್ಯರು, ಶಾಸಕರ ಜತೆ, ಪಕ್ಷ ಬಲಪಡಿಸುವುದು ಮತ್ತು ಮುಂಬರುವ ಚುನಾವಣೆಗಳಿಗೆ ಕಾರ್ಯತಂತ್ರ ರೂಪಿಸುವ ಕುರಿತು ಚರ್ಚಿಸಲಿದ್ದಾರೆ.ನಗರದ ನಿಜಲಿಂಗಪ್ಪ ಬಡಾವಣೆಯಲ್ಲಿ ನಿರ್ಮಿಸಿರುವ ಜಿಲ್ಲಾ ಕಾಂಗ್ರೆಸ್ ಭವನದ ಕಚೇರಿ ಉದ್ಘಾಟನೆಯೂ ಇದೇ ಸಂದರ್ಭದಲ್ಲಿ ನೆರವೇರಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.