ಬುಧವಾರ, ಮಾರ್ಚ್ 3, 2021
23 °C
ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ

ದಾವಣಗೆರೆ ವಿ.ವಿ ಕುಲಪತಿಗೆ ನೋಟಿಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ ವಿ.ವಿ ಕುಲಪತಿಗೆ ನೋಟಿಸ್‌

ದಾವಣಗೆರೆ: ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಬಿ.ಕಲಿವಾಳ ಅವರಿಗೆ ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಸ್‌.ಟಿ.ಅಂಜನಕುಮಾರ್‌ ಶನಿವಾರ ನೋಟಿಸ್‌ ಜಾರಿ ಮಾಡಿದ್ದಾರೆ.



ವಿವಿಯ ಆವರಣದಲ್ಲಿ ಗುರುವಾರ ವಿದ್ಯಾವಿಷಯಕ ಪರಿಷತ್‌ ಸಾಮಾನ್ಯ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಹರಿಹರ ಕ್ಷೇತ್ರದ ಶಾಸಕ, ವಿದ್ಯಾವಿಷಯಕ ಪರಿಷತ್‌ ಸದಸ್ಯ ಎಚ್‌.ಎಸ್‌.ಶಿವಶಂಕರ್‌ ಪಾಲ್ಗೊಂಡಿದ್ದರು. ಕುಲಪತಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.



ವಿವಿ ಅಭಿವೃದ್ಧಿಗೆ ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಿಯೋಗ ಕರೆದೊಯ್ದು ಅನುದಾನ ಬಿಡುಗಡೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸುವ ಹಾಗೂ ಹೆಚ್ಚಿನ ಪ್ರಮಾಣದಲ್ಲಿ ಕೇಂದ್ರ ಸರ್ಕಾರದ ಅನುದಾನ ತರುವ ಚರ್ಚೆಗಳು ಸಭೆಯಲ್ಲಿ ನಡೆದಿದ್ದವು. ಅದಕ್ಕಾಗಿ ಕುಲಪತಿಗೆ ನೋಟಿಸ್‌ ಜಾರಿ ಮಾಡಲಾಗಿದೆ ಎಂದು ಅಂಜನಕುಮಾರ್‌ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.