ಸೋಮವಾರ, ಜನವರಿ 20, 2020
29 °C

ದಾವೋಸ್‌ನಲ್ಲಿ ಇಂದಿನಿಂದ ವಿಶ್ವ ವಾಣಿಜ್ಯ ಶೃಂಗ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ದಾವೋಸ್‌ನಲ್ಲಿ ಜ. 25ರಿಂದ ವಿಶ್ವ ವಾಣಿಜ್ಯ ಶೃಂಗ ಸಭೆ (ಡಬ್ಲ್ಯುಇಎಫ್) ನಡೆಯಲಿದ್ದು, ಮುಖೇಶ್‌ಅಂಬಾನಿ, ಸುನಿಲ್ ಮಿತ್ತಲ್, ರಾಹುಲ್ ಬಜಾಜ್, ಅಜೀಂ ಪ್ರೇಮ್‌ಜಿ ಸೇರಿದಂತೆ ದೇಶದ 100ಕ್ಕೂ ಹೆಚ್ಚು ಉದ್ಯಮ ಮುಖಂಡರು ಭಾಗವಹಿಸಲಿದ್ದಾರೆ.ಕೈಗಾರಿಕಾ ಸಚಿವ ಆನಂದ ಶರ್ಮಾ, ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್ ಸಿಂಗ್ ಅಹ್ಲುವಾಲಿಯಾ ಅವರೂ ಈ ವಾರ್ಷಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಮುಖವಾಗಿ ಜಾಗತಿಕ ಆರ್ಥಿಕ ಅಸ್ಥಿರತೆ ಮತ್ತು ಪ್ರವರ್ಧಮಾನಕ್ಕೆ ಬರುತ್ತಿರುವ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಈ ಐದು ದಿನಗಳ ಸಭೆಯಲ್ಲಿ ಚರ್ಚೆ ನಡೆಯಲಿದೆ. ಜರ್ಮನಿಯ ಛಾನ್ಸಲರ್ ಏಂಜೆಲಾ ಮರ್ಕೆಲ್ ಶೃಂಗಸಭೆ ಉದ್ಘಾಟಿಸಲಿದ್ದಾರೆ.

ಪ್ರತಿಕ್ರಿಯಿಸಿ (+)