ಮುರಗೋಡ (ಬೈಲಹೊಂಗಲ): ದಿಢೀರ್ ಬ್ರೇಕ್ ಹಾಕಿದ ಪರಿಣಾಮವಾಗಿ ಜೀಪಿನಲ್ಲಿದ್ದ ಇನ್ಸ್ಪೆಕ್ಟರ್ ನೆಲಕ್ಕುರುಳಿ ಮೃತಪಟ್ಟ ಘಟನೆ ಸವದತ್ತಿ ತಾಲ್ಲೂಕಿನ ಸೊಪ್ಪಡ್ಲ ಗ್ರಾಮದ ಬಳಿ ಬಾಗಲಕೋಟೆ- ಬೆಳಗಾವಿ ರಸ್ತೆಯಲ್ಲಿ ಶುಕ್ರವಾರ ಜರುಗಿದೆ.

ಮೃತ ವ್ಯಕ್ತಿಯನ್ನು ವಿಜಾಪುರ ಮೀಸಲು ಪೊಲೀಸ್ ಪಡೆಯ ಇನ್ಸ್ಪೆಕ್ಟರ್ ಚೌಗುಲು ಬಿ. ಲಮಾಣಿ (58) ಎಂದು ಗುರುತಿಸಲಾಗಿದೆ.

ಗುರುವಾರ ಬೆಳಗಾವಿಯಲ್ಲಿ ಜರುಗಿದ ರಾಜ್ಯೋತ್ಸವ ಸಮಾರಂಭದ ಬಂದೋಬಸ್ತ್ನಲ್ಲಿ ಕಾರ್ಯ ನಿರ್ವಹಿಸಿ ಮರಳಿ ವಿಜಾಪುರಕ್ಕೆ ತೆರಳುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಯರಗಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸುವಷ್ಟರಲ್ಲಿ ಕೊನೆ ಉಸಿರೆಳೆದಿದ್ದಾರೆ. ಬೈಲಹೊಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.