ದಿನಗೂಲಿ ಕಾರ್ಮಿಕರಿಗೆ ತೊಂದರೆ: ಪ್ರತಿಭಟನೆ

7
ಮರಳು ಲಾರಿ ಮಾಲೀಕರ ಮುಷ್ಕರ

ದಿನಗೂಲಿ ಕಾರ್ಮಿಕರಿಗೆ ತೊಂದರೆ: ಪ್ರತಿಭಟನೆ

Published:
Updated:

ಬೆಂಗಳೂರು: ಮರಳು ಲಾರಿ ಮಾಲೀಕರ ಮುಷ್ಕರದಿಂದ ಕಟ್ಟಡ ಕಾರ್ಮಿಕರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಒಕ್ಕೂಟದ ಸದಸ್ಯರು ನಗರದ ಪುರಭವನದ ಬಳಿ ಮಂಗಳವಾರ ಪ್ರತಿಭಟನೆ ನಡೆಸಿದರು.ಈ ವೇಳೆ ಮಾತನಾಡಿದ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಮಾದೇಶ್, ‘ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮರಳು ಲಾರಿಗಳ ಮಾಲೀಕರು ನಡೆಸುತ್ತಿರುವ ಮುಷ್ಕರ 18ನೇ ದಿನಕ್ಕೆ ಕಾಲಿಟ್ಟಿದೆ. ಇದು ಕಟ್ಟಡ ನಿರ್ಮಾಣ ಚಟುವಟಿಕೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಹಲವೆಡೆ ನಿರ್ಮಾಣ ಕಾರ್ಯ ಚಟುವಟಿಕೆಗಳು ಸ್ಥಗಿತ­ಗೊಂಡಿದ್ದು, ಕೂಲಿ ಕಾರ್ಮಿಕರು ದುಡಿಮೆ ಇಲ್ಲದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಕೂಡಲೇ ಲಾರಿ ಮಾಲೀಕರ ಜತೆ ಚರ್ಚಿಸಿ ಪರಿಹಾರದ ಭರವಸೆ ನೀಡಬೇಕು’ ಎಂದು ಪ್ರತಿಭಟನಾಕಾರರು  ಒತ್ತಾಯಿಸಿದರು.

ನಂತರ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಕಾರ್ಮಿಕರ ಒಕ್ಕೂಟದ ಸದಸ್ಯ ಬಿ.ಎನ್‌.ರಘು, ‘ನಗರದಲ್ಲೇ 80 ಸಾವಿರದಿಂದ 1 ಲಕ್ಷ ಕಟ್ಟಡ ಕಾರ್ಮಿಕರಿದ್ದಾರೆ. ಮುಷ್ಕರದಿಂದಾಗಿ ಅಷ್ಟೂ ಕಾರ್ಮಿಕರು ಹಾಗೂ ಅವರನ್ನೇ ನಂಬಿರುವ ಕುಟುಂಬ ಸದಸ್ಯರು ಬೀದಿಗೆ ಬಿದ್ದಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry