ಮಂಗಳವಾರ, ಮೇ 17, 2022
23 °C

ದಿನದ 24 ಗಂಟೆ ಸಿಬ್ಬಂದಿ ಕೆಲಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರಕೃತಿ ವಿಕೋಪ ಪರಿಸ್ಥಿತಿ ಎದುರಿಸಲು ಬಿಬಿಎಂಪಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಪಾಲಿಕೆ ವ್ಯಾಪ್ತಿಯಲ್ಲಿನ 10 ನಿಯಂತ್ರಣ ಕೊಠಡಿಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿವೆ.ನಿಯಂತ್ರಣ ಕೊಠಡಿಗಳು ವಾರದ ಏಳು ದಿನಗಳಲ್ಲಿಯೂ ಕಾರ್ಯನಿರ್ವಹಿಸಲಿದ್ದು, ಸಾರ್ವಜನಿಕರಿಂದ ಸ್ವೀಕರಿಸುವ ದೂರುಗಳನ್ನು ವೈರ್‌ಲೆಸ್ ಮುಖಾಂತರ ಸಂಬಂಧಪಟ್ಟ ಅಧಿಕಾರಿಗಳಿಗೆ ರವಾನಿಸಿ, ತಕ್ಷಣ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗುತ್ತದೆ ಎಂದು ಪಾಲಿಕೆ ಆಯುಕ್ತ ಎಂ.ಕೆ. ಶಂಕರಲಿಂಗೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಪಾಲಿಕೆ ನಿಯಂತ್ರಣ ಕೊಠಡಿಗಳಲ್ಲಿ 13 ಪ್ರಹರಿ ವಾಹನಗಳ ಜತೆಗೆ, 200 ಮಂದಿ ಗ್ಯಾಂಗ್‌ಮೆನ್‌ಗಳು ಎಂತಹುದೇ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧವಾಗಿವೆ. ಇನ್ನು ಅರಣ್ಯ ಘಟಕದಲ್ಲಿ 20 ಮರ ಕಡಿಯುವ ತಂಡಗಳನ್ನು ಸಜ್ಜಾಗಿಡಲಾಗಿದ್ದು, ಪ್ರತಿಯೊಂದು ತಂಡದಲ್ಲಿ ಎಂಟು ಜನರಂತೆ 160 ಮಂದಿ ಗ್ಯಾಂಗ್‌ಮೆನ್‌ಗಳು ಕಾರ್ಯನಿರ್ವಹಿಸಲಿದ್ದಾರೆ.ಈ ತಂಡಗಳು ಮರ ಉರುಳುವ ಸ್ಥಳಕ್ಕೆ ತಕ್ಷಣ ಧಾವಿಸಿ ಒಂದು ಗಂಟೆಯೊಳಗಾಗಿ ತೆರವುಗೊಳಿಸುವ ಮೂಲಕ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಿವೆ. ಸಣ್ಣ ಪುಟ್ಟ ಕೊಂಬೆ-ರೆಂಬೆಗಳನ್ನು ಸಾಗಿಸಲು ಸಿಬ್ಬಂದಿಗೆ ವಾಹನ ಸೌಲಭ್ಯ ಕಲ್ಪಿಸಲಾಗಿದ್ದು, ಪವರ್ ಸಾ, ಹಗ್ಗ, ಮಚ್ಚು ಮತ್ತಿತರ ಸಲಕರಣೆಗಳನ್ನೂ ಒದಗಿಸಲಾಗಿದೆ.

ಮಳೆಗಾಲದಲ್ಲಿ ಬೃಹತ್ ಮಳೆ ನೀರಿನ ಕಾಲುವೆಗಳು ಉಕ್ಕಿ ಹರಿದು ಜಲಾವೃತಗೊಳ್ಳಬಹುದಾದಂತಹ 70 ತಗ್ಗು ಪ್ರದೇಶಗಳನ್ನು ಗುರುತಿಸಲಾಗಿದೆ.ಈ ತಗ್ಗು ಪ್ರದೇಶಗಳಲ್ಲಿ ಶಾಶ್ವತ ಪರಿಹಾರ ಕಾಮಗಾರಿಗಳನ್ನು ತಡೆಯಲು 116 ಕೋಟಿ ರೂಪಾಯಿ ವೆಚ್ಚದಲ್ಲಿ ಟೆಂಡರ್ ಕರೆಯಲಾಗಿದೆ. ಟೆಂಡರ್ ಪ್ರಕ್ರಿಯೆ ಮುಗಿದ ನಂತರ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.