ಮಂಗಳವಾರ, ಜೂನ್ 15, 2021
23 °C

ದಿನ್ನೆಗೇರಹಳ್ಳಿ: ರೈತರಿಗೆ ಸೀಮೆ ಹಸು ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ತಾಲ್ಲೂಕಿನ ದಿನ್ನೆಗೇರಹಳ್ಳಿ ಬಳಿ ಜಲಾನಯನ ಅಭಿವೃದ್ಧಿ ಇಲಾಖೆ ವತಿಯಿಂದ ಶನಿವಾರ ನಡೆದ ಕಾರ್ಯಕ್ರಮದಲ್ಲಿ ರೈತರಿಗೆ 50 ಸೀಮೆ ಹಸುಗಳನ್ನು ವಿತರಿಸಲಾಯಿತು.ಗೇರಹಳ್ಳಿ, ಗುಂತಪ್ಪನಹಳ್ಳಿ, ಅರಕೆರೆ, ಮುಸ್ಟೂರು ಗ್ರಾಮಗಳ ವ್ಯಾಪ್ತಿಯ ರೈತರು ಹಸು ಮತ್ತು ಚೆಕ್‌ಗಳನ್ನು ಪಡೆದರು.ಜಲಾನಯನ ಅಭಿವೃದ್ಧಿ ಇಲಾಖೆ ಸಹಾಯಕ ನಿರ್ದೇಶಕ ಮಧುನಾಥರೆಡ್ಡಿ ಮಾತನಾಡಿ, `ರೈತರಿಗೆ ನೆರವಾಗಲೆಂದೇ ಸರ್ಕಾರದ ವತಿಯಿಂದ ಮಳೆಯಾಶ್ರಿತ ಪ್ರದೇಶಾಭಿವೃದ್ಧಿ ಯೋಜನೆಯಡಿ ರೂ. 45.5 ಲಕ್ಷ ಅನುದಾನ ಬಿಡುಗಡೆಯಾಗಿದೆ. ಇದರಲ್ಲಿ ಚಿಕ್ಕಬಳ್ಳಾಪುರ ತಾಲ್ಲೂಕಿಗೆ ರೂ. 11.5 ಲಕ್ಷ ಮೀಸಲಿಡಲಾಗಿದೆ~ ಎಂದರು.ರೂ. 40 ಸಾವಿರ ಮೌಲ್ಯದ ಹಸುವನ್ನು ರೈತರಿಗೆ ಸಬ್ಸಿಡಿ ದರದಲ್ಲಿ ನೀಡಲಾಗುತ್ತಿದೆ. ಜಿಲ್ಲೆಯಾದ್ಯಂತ ಕ್ಲಸ್ಟರ್ ಮಟ್ಟದಲ್ಲಿ ಹಸುಗಳನ್ನು ವಿತರಿಸಲಾಗುತ್ತಿದೆ. ಜಿಲ್ಲೆಯ ಆರೂ ತಾಲ್ಲೂಕುಗಳಲ್ಲೂ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ~ ಎಂದು ಹೇಳಿದರು.ಶಾಸಕ ಕೆ.ಪಿ.ಬಚ್ಚೇಗೌಡ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಎನ್.ಮುನೇಗೌಡ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷ ವೆಂಕಟನಾರಾಯಣಪ್ಪ, ಕಾರ್ಯನಿರ್ವಹಣಾಧಿಕಾರಿ ರಾಮಚಂದ್ರರೆಡ್ಡಿ, ಜೆಡಿಎಸ್ ಮುಖಂಡ ಶ್ರೀರಾಮಯ್ಯ, ಪಶುಸಂಗೋಪನಾ ಇಲಾಖೆ ಅಧಿಕಾರಿ ಗೋವಿಂದಪ್ಪ ಮತ್ತಿತತರು ಉಪಸ್ಥಿತರಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.