ಬುಧವಾರ, ಏಪ್ರಿಲ್ 21, 2021
31 °C

ದೀಪಾವಳಿಗೆ ಹೆಚ್ಚುವರಿ ಬಸ್ ವ್ಯವಸ್ಥೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬೇರೆ ಊರುಗಳಿಗೆ ಹೋಗುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವುದರಿಂದ ರಾಜ್ಯ ರಸ್ತೆ ಸಾರಿಗೆ ನಿಗಮವು ಇದೇ 9ರಿಂದ 14ರ ವರೆಗೆ 500 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದೆ.ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಬಿಜಾಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಗುಲ್ಬರ್ಗ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್ ಮತ್ತು ತಿರುಪತಿಗೆ ವಿಶೇಷ ಬಸ್‌ಗಳು ಸಂಚರಿಸಲಿವೆ.ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆಗೆ ಹೆಚ್ಚುವರಿ ಬಗಳ ಸಂಚಾರವನ್ನು ಆರಂಭಿಸಲಾಗುವುದು.ಚೆನ್ನೈ, ಮಧುರೆ, ಕುಂಬಕೋಣಂ, ಕೊಯಮತ್ತೂರು, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಬಸ್‌ಗಳು ಹೊರಡಲಿವೆ. ನಗರದ ಜೆ.ಪಿ.ನಗರ, ಜಯನಗರ 4ನೇ ಹಂತ ಹಾಗೂ 9ನೇ ಹಂತ, ಜಾಲಹಳ್ಳಿ ಕ್ರಾಸ್, ನವರಂಗ್ (ರಾಜಾಜಿನಗರ), ಮಲ್ಲೇಶ್ವರ 18ನೇ ಅಡ್ಡರಸ್ತೆ, ಕೆಂಗೇರಿ ಉಪನಗರ ಮತ್ತಿತರ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಮತ್ತಿತರ ಮಾರ್ಗಗಳಿಗೆ ಹೆಚ್ಚುವರಿ ಬಸ್‌ಗಳನ್ನು ಬಿಡಲಾಗುವುದು ಎಂದು ಸಂಸ್ಥೆ ತಿಳಿಸಿದೆ.ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಬಿಜಾಪುರ, ಗೋಕರ್ಣ, ಶಿರಸಿ, ಕಾರವಾರ ಸೇರಿದಂತೆ ವಾಯುವ್ಯ ಕರ್ನಾಟಕದ ಪ್ರದೇಶಗಳ ಕಡೆಗೆ ಹಾಗೂ ಗುಲ್ಬರ್ಗ, ಬಳ್ಳಾರಿ, ರಾಯಚೂರು, ಹೊಸಪೇಟೆ, ಕೊಪ್ಪಳ, ಯಾದಗಿರಿ, ಬೀದರ್ ಸೇರಿದಂತೆ ಈಶಾನ್ಯ ಕರ್ನಾಟಕದ ಪ್ರದೇಶಗಳಿಗೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಆಸನ ಕಾಯ್ದಿರಿಸಿದಲ್ಲಿ ಪ್ರಯಾಣ ದರದಲ್ಲಿ ಶೇ 5ರಷ್ಟು ಮತ್ತು ಎರಡೂ ಕಡೆಗೆ ಮುಂಗಡ ಆಸನ ಕಾಯ್ದಿರಿಸುವ ಪ್ರಯಾಣಿಕರಿಗೆ ಶೇ 10 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಸಂಸ್ಥೆ ಹೇಳಿದೆ.ಪ್ರಯಾಣಿಕರು ನಗರದಲ್ಲಿರುವ 173 ಸೇವಾ ಕೇಂದ್ರಗಳಲ್ಲಿ, ಅಂತರ್ಜಾಲ ವಿಳಾಸ www.ksrtc.in  ರಲ್ಲಿ ಅಥವಾ 56767 ಸಂಖ್ಯೆಗೆ ಎಸ್‌ಎಂಎಸ್ ಕಳಿಸುವ ಮೂಲಕ ಆಸನಗಳನ್ನು ಕಾಯ್ದಿರಿಸಬಹುದು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.