ಭಾನುವಾರ, ಜೂನ್ 13, 2021
22 °C

ದುಡಿಮೆ ಬಿಡದ ಹಳ್ಳಿ ಮಕ್ಕಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀನಿವಾಸಪುರ: ಈಗ ವಿದ್ಯಾರ್ಥಿಗಳಿಗೆ ಪರೀಕ್ಷೆ ಕಾಲ. ಪಿಯುಸಿ ಪರೀಕ್ಷೆ ಈಗಾಗಲೇ ಆರಂಭವಾಗಿದೆ. ಇನ್ನೂ ಪ್ರಾಥಮಿಕ-ಪ್ರೌಢಶಾಲೆಗಳ ಪರೀಕ್ಷೆಗೆ ಕ್ಷಣ ಗಣನೆ ಆರಂಭವಾಗಿದೆ. ಆದರೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಮಾತ್ರ ತಮ್ಮ ದೈನಂದಿನ ದೈಹಿಕ ಕೆಲಸದಿಂದ ದೂರವಾಗಿಲ್ಲ.



ಹಳ್ಳಿ ವಿದ್ಯಾರ್ಥಿಗಳು ಓದಿನ ಜೊತೆಗೆ ಮನೆ ಕೆಲಸವನ್ನು ಮಾಡಲೇ ಬೇಕಾದ ಅನಿವಾರ್ಯತೆಗೆ ಸಿಕ್ಕಿಬಿದ್ದಿದ್ದಾರೆ. ಗಂಡು ಮಕ್ಕಳಾದರೆ ಸೌದೆ ತರಬೇಕು. ಹಾಲು ಕರೆದು ಡೇರಿಗೆ ಹಾಕಬೇಕು. ತೋಟದಲ್ಲಿ ನೀರು ಕಟ್ಟಬೇಕು. ಹೆಣ್ಣು ಮಕ್ಕಳು ಬೆಳಿಗ್ಗೆ ಹುಲ್ಲಿಗೆ ಹೋಗಬೇಕು. ಕೆಲವು ಸಲ ತೋಟದಲ್ಲಿ ಹಿರಿಯರೊಂದಿಗೆ ದುಡಿಯಬೇಕು.

ಈಚಿನ ವರ್ಷಗಳಲ್ಲಿ ಗ್ರಾಮೀಣ ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಗಮನ ನೀಡಿದ್ದಾರೆ.  ಕೆಲಸದ ಅನಿವಾರ್ಯತೆಯನ್ನು ಅರಿತ ಮಕ್ಕಳು ಓದು , ಕೆಲಸವನ್ನು ಒಟ್ಟಿಗೆ ನಿರ್ವಹಿಸಿಕೊಂಡು ಹೋಗುತ್ತಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.