ಬುಧವಾರ, ಏಪ್ರಿಲ್ 14, 2021
23 °C

ದುಬೈನಲ್ಲಿ ತಾಜ್‌ಮಹಲ್ ಪ್ರತಿಕೃತಿ ನಿರ್ಮಾಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದುಬೈ (ಪಿಟಿಐ): ಅಮರ ಪ್ರೇಮದ ಸಂಕೇತವಾದ ಆಗ್ರಾದ ತಾಜ್ ಮಹಲ್‌ನ ಪಡಿಯಚ್ಚು 5400 (100 ಕೋಟಿ ಡಾಲರ್) ಕೋಟಿ ರೂಪಾಯಿ ವೆಚ್ಚದಲ್ಲಿ ದುಬೈನಲ್ಲಿ ನಿರ್ಮಾಣವಾಗುತ್ತಿದ್ದು, 2014ರಲ್ಲಿ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ.ಈ ಪ್ರತಿರೂಪ ಆಗ್ರಾದಲ್ಲಿರುವ ತಾಜ್‌ಮಹಲ್‌ಗಿಂತ ನಾಲ್ಕು ಪಟ್ಟು ದೊಡ್ಡದಿರುತ್ತದೆ ಎಂದು ಹೇಳಲಾಗಿದೆ.

ಹತ್ತು ಲಕ್ಷ ಚದರ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಈ ಪ್ರತಿರೂಪವನ್ನು ವಾಣಿಜ್ಯ ಉದ್ದೇಶದಿಂದ ನಿರ್ಮಿಸಲಾಗುತ್ತಿದ್ದು, 300 ಹೋಟೆಲ್ ಕೊಠಡಿಗಳು, ಚಿನ್ನಾಭರಣ ಮಳಿಗೆಗಳು ಸೇರಿದಂತೆ ಇತರ ಮಳಿಗೆಗಳು ಇರುತ್ತವೆ ಎಂದು ಇದರ ನಿರ್ಮಾಣದ ಜವಾಬ್ದಾರಿ ಹೊತ್ತಿರುವ ಲಿಂಕ್ ಗ್ಲೋಬಲ್ ಹೇಳಿದೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.