ದುರಸ್ತಿಯಲ್ಲಿ 10,522 ದೇವಸ್ಥಾನಗಳು

7

ದುರಸ್ತಿಯಲ್ಲಿ 10,522 ದೇವಸ್ಥಾನಗಳು

Published:
Updated:

ಬೆಂಗಳೂರು:ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ರಾಜ್ಯದ 10,552 ದೇವಸ್ಥಾನಗಳು ದುರಸ್ತಿಯಲ್ಲಿವೆ ಎಂದು ಮುಜರಾಯಿ ಸಚಿವ ಡಾ.ವಿ.ಎಸ್. ಆಚಾರ್ಯ ಅವರು ವಿಧಾನ ಪರಿಷತ್‌ನಲ್ಲಿ ತಿಳಿಸಿದ್ದಾರೆ.ವಿಧಾನ ಪರಿಷತ್ ಸದಸ್ಯ ಆರ್.ವಿ. ವೆಂಕಟೇಶ್ ಅವರ ಪ್ರಶ್ನೆಗೆ ಅವರು ಲಿಖಿತ ಉತ್ತರ ನೀಡಿದರು.ಈ ದೇವಸ್ಥಾನಗಳ ದುರಸ್ತಿ ಕಾರ್ಯಕ್ಕೆ ಮೊದಲ ಹಂತದಲ್ಲಿ 50 ಕೋಟಿ ರೂಪಾಯಿ ಅಗತ್ಯ ಇದೆ ಎಂದು ಅವರು ಹೇಳಿದ್ದಾರೆ.ಈ ಕುರಿತಂತೆ 2011-12ನೇ ಸಾಲಿನಲ್ಲಿ ಅನುದಾನ ಒದಗಿಸುವಂತೆ ಹಣಕಾಸು ಇಲಾಖೆಯನ್ನು ಕೋರಲಾಗಿದ್ದು, ಅನುದಾನ ದೊರೆತ ನಂತರ ದುರಸ್ತಿ ಕಾರ್ಯ ಆರಂಭಿಸಲಾಗುವುದು ಎಂದು ಉತ್ತರ ನೀಡಿದ್ದಾರೆ.ದೇವಸ್ಥಾನಗಳ ದುರಸ್ತಿ ಕಾರ್ಯಕ್ಕೆ ಅವರು ಯಾವುದೇ ಕಾಲಮಿತಿ ನಿಗದಿಪಡಿಸಿಲ್ಲ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry