ದುರಾಡಳಿತಕ್ಕೆ ಪಾಠ ಕಲಿಸಿ

7

ದುರಾಡಳಿತಕ್ಕೆ ಪಾಠ ಕಲಿಸಿ

Published:
Updated:

ಚಳ್ಳಕೆರೆ: ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗೆ ಒತ್ತು ನೀಡಲು ಜನರು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ಪಕ್ಷಕ್ಕೆ ಬೆಂಬಲಿಸಬೇಕು ಎಂದು ಶಾಸಕ ಎನ್.ವೈ. ಗೋಪಾಲಕೃಷ್ಣ ಕರೆ ನೀಡಿದರು. ತಳಕು ಹೋಬಳಿ ಓಬಳಾಪುರದಲ್ಲಿ ಶನಿವಾರ ಜಿಲ್ಲಾ ಕಾಂಗ್ರೆಸ್ ವತಿಯಿಂದ `ಕಾಂಗ್ರೆಸ್‌ಗೆ ಬನ್ನಿ ಬದಲಾವಣೆ ತನ್ನಿ~ ಕಾರ್ಯಕ್ರಮದಲ್ಲಿ  ಅವರು ಮಾತನಾಡಿದರು.ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಬದಲಾಗಿ ಸ್ವಾರ್ಥ ರಾಜಕಾರಣ ಮಾಡುತ್ತಾ, ಅಧಿಕಾರಕ್ಕಾಗಿ ಕಿತ್ತಾಡಿಕೊಂಡು ಅಭಿವೃದ್ಧಿಯ ಕಡೆಗೆ ತಮ್ಮ ನಿರ್ಲಕ್ಷ್ಯ ತೋರಿದ್ದಾರೆ ಎಂದು ದೂರಿದರು.ಅನುಕಂಪದ ಆಧಾರದಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ ರೈತರ ಸಮಸ್ಯೆಗಳಿಗೆ ಕಿಂಚಿತ್ತೂ ಪರಿಹಾರ ಕಲ್ಪಿಸದೇ ಚುನಾವಣೆ ಸಮಯದಲ್ಲಿ ನೀಡಿದ್ದ ಭರವಸೆ ಸಂಪೂರ್ಣ ಮರೆತಿದ್ದಾರೆ ಎಂದು ಅವರು ಲೇವಡಿ ಮಾಡಿದರು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎ. ಸೇತೂರಾಂ ಮಾತನಾಡಿ, ರಾಜ್ಯದಲ್ಲಿ ಯಾವುದೇ ಸಮಯದಲ್ಲಾದರೂ ಬಿಜೆಪಿ ಸರ್ಕಾರ ಅಧಿಕಾರ ಕಳೆದುಕೊಳ್ಳಬಹುದು. ಆದ್ದರಿಂದ, ಕಾರ್ಯಕರ್ತರು ಚುನಾವಣೆಗೆ ಸಿದ್ಧರಾಗಿ, ಗ್ರಾಮೀಣ ಪ್ರದೇಶಗಳಲ್ಲಿ ಪಕ್ಷವನ್ನು ಸಂಘಟಿಸುವ ಕಡೆಗೆ ಗಮನಹರಿಸಬೇಕು ಎಂದು ತಿಳಿಸಿದರು.ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಸಂಪತ್‌ಕುಮಾರ್, ಜಿಲ್ಲಾ ಪಂಚಾಯ್ತಿ ಮಾಜಿ  ಅಧ್ಯಕ್ಷ ಬಾಲರಾಜ್, ಬ್ಲಾಕ್ ಕಾಂಗ್ರೆಸ್  ಅಧ್ಯಕ್ಷ ಮಾರನಾಯಕ, ಯುವ ಕಾಂಗ್ರೆಸ್ ಅಧ್ಯಕ್ಷ ಬಿ. ಯೋಗೀಶ್ ಬಾಬು, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ತಿಪ್ಪೇಸ್ವಾಮಿ, ಕೆ.ಪಿ. ಭೂತಯ್ಯ, ಜಿಲ್ಲಾ ಪಂಚಾಯ್ತಿ ಸದಸ್ಯೆ ಜಯಮ್ಮ ಬಾಲರಾಜ್, ತಾಲ್ಲೂಕು ಸದಸ್ಯರಾದ ಜೆ. ತಿಪ್ಪೇಶ್‌ಕುಮಾರ್, ಚಂದ್ರಣ್ಣ, ದಾಕ್ಷಾಯಣಮ್ಮ, ನಿವೃತ್ತ ಡಿವೈಎಸ್ಪಿ ತಿಮ್ಮಪ್ಪ, ಪಟ್ಟಣ ಪಂಚಾಯ್ತಿ ಸದಸ್ಯ ಜಿ. ಪ್ರಕಾಶ್, ತಳಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಣ್ಣ, ತಿಪ್ಪೇಸ್ವಾಮಿ ರೆಡ್ಡಿ, ರಾಮಪ್ಪ, ತಿಮ್ಮಣ್ಣ ಇದ್ದರು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry