ಮಂಗಳವಾರ, ಅಕ್ಟೋಬರ್ 15, 2019
26 °C

ದುರ್ಗಾಜೋಗಹಳ್ಳಿ ಗ್ರಾ.ಪಂ. ಫಲಿತಾಂಶ

Published:
Updated:

ದೊಡ್ಡಬಳ್ಳಾಪುರ: ತಾಲ್ಲೂಕಿನ ದರ್ಗಾಜೋಗಹಳ್ಳಿ ಗ್ರಾ. ಪಂ. ಚುನಾವಣಾ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, 9 ಸದಸ್ಯ ಬಲದ ಪಂಚಾಯಿತಿಯಲ್ಲಿ ಬಿಜೆಪಿ ಬೆಂಬಲಿತ 6, ಕಾಂಗ್ರೆಸ್ ಬೆಂಬಲತ ಇಬ್ಬರು, ಜೆಡಿಎಸ್ ಬೆಂಬಲಿತ ಒಬ್ಬ ಸದಸ್ಯರು ಆಯ್ಕೆಯಾಗಿದ್ದಾರೆ.ಬಿಜೆಪಿ ಬೆಂಬಲಿತ ಶಶಿಕಲಾ, ರಂಗಮ್ಮ, ಪಾರ್ವತಮ್ಮ, ಡಿ.ಎನ್.ತಿಮ್ಮರಾಜ್, ಗಂಗಮ್ಮ , ನಾರಾಯಣಮ್ಮ  ,ಕಾಂಗ್ರೆಸ್ ಬೆಂಬಲಿತ ವೆಂಕಟೇಶ್, ನಾರಾಯಣಮ್ಮ  ಮತ್ತು ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಎನ್.ಚಂದ್ರಕಲಾ ಆಯ್ಕೆಯಾಗಿದ್ದಾರೆ. ಗ್ರಾಮ ಪಂಚಾಯಿತಿಗೆ ಜ.10 ರಂದು ಚುನಾವಣೆ ನಡೆದಿತ್ತು.ಸಂಭ್ರಮ: ತಾಲ್ಲೂಕು ಕಚೇರಿಯಲ್ಲಿ ಮತ ಎಣಿಕೆ ಮುಗಿದು, ಫಲಿತಾಂಶ ಪ್ರಕಟವಾಗುತ್ತಿದ್ದಂತೆ, ತಾಲ್ಲೂಕು ಕಚೇರಿ ವೃತ್ತದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳಿಗೆ ಹೂಮಾಲೆ ಹಾಕಿ ಅಭಿನಂದಿಸಿದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು.

Post Comments (+)