ಗುರುವಾರ , ಮೇ 19, 2022
23 °C

ದುಲೀಪ್ ಟ್ರೋಫಿ: ಕೇರಳದಲ್ಲಿ ಫೈನಲ್ ಪಂದ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಚ್ಚಿ (ಪಿಟಿಐ): ಅಖಿಲ ಭಾರತ ದುಲೀಪ್ ಟ್ರೋಫಿಯ ಫೈನಲ್ ಪಂದ್ಯಕ್ಕೆ ಆತಿಥ್ಯ ವಹಿಸುವ ಅವಕಾಶ ಮೊದಲ ಬಾರಿಗೆ ಕೇರಳಕ್ಕೆ ಲಭಿಸಿದೆ. ಇಲ್ಲಿನ ಜವಾಹರಲಾಲ್ ನೆಹರೂ ಕ್ರೀಡಾಂಗಣದಲ್ಲಿ ಅಕ್ಟೋಬರ್ 17 ರಿಂದ 21ರ ವರೆಗೆ ಫೈನಲ್ ಪಂದ್ಯ ನಡೆಯಲಿದೆ.ಚೆನ್ನೈನಲ್ಲಿ ನಡೆದ ದಕ್ಷಿಣ ವಲಯ ಪಂದ್ಯ ನಿಗದಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇರಳ ಕ್ರಿಕೆಟ್ ಸಂಸ್ಥೆ (ಕೆಸಿಎ) ಪ್ರಕಟಣೆಯಲ್ಲಿ ಶನಿವಾರ ತಿಳಿಸಿದೆ. ಅಕ್ಟೋಬರ್ 10 ರಿಂದ 13ರ ವರೆಗೆ ಸೆಮಿಫೈನಲ್ ಪಂದ್ಯಗಳು ನಡೆಯಲಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.