ಸೋಮವಾರ, ಜನವರಿ 27, 2020
23 °C

ದುಷ್ಕರ್ಮಿಗಳ ಗುಂಡಿಗೆ ಆರ್. ಎನ್ ನಾಯಕ ಬಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಂಕೋಲಾ : ಸಹಕಾರಿ ಧುರೀಣ ಆರ್. ಎನ್ ನಾಯಕ ಅವರನ್ನು ಮೂವರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.

ದ್ವಾರಕಾ ಸೌಹಾರ್ದ ಸಹಕಾರಿ ಸಂಘದ ಸಂಸ್ಥಾಪಕ ಮತ್ತು ಅಧ್ಯಕ್ಷ ಆರ್. ಎನ್. ನಾಯಕ ಅವರು ಮಧ್ಯಾಹ್ನ ತಮ್ಮ ಕಚೇರಿಯಿಂದ ಕಾರಿನಲ್ಲಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.  ದುಷ್ಕರ್ಮಿಗಳಲ್ಲಿ ಒಬ್ಬ ಗುಂಡಿನ ದಾಳಿ ನಡೆಸಿದ್ದು, ಗುಂಡೇಟು ತಗಲಿದ ನಾಯಕ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅವರ ಅಂಗರಕ್ಷಕ ರಮೇಶ್‌ಗೌಡ ಪ್ರತಿದಾಳಿ ನಡೆಸಿದಾಗ ಒಬ್ಬ ದುಷ್ಕರ್ಮಿ ಸಾವನ್ನಪ್ಪಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಸಾರ್ವಜನಿಕರು ಒಬ್ಬನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಇನ್ನೊಬ್ಬ ಪರಾರಿಯಾಗಿದ್ದಾನೆ.

ಪ್ರತಿಕ್ರಿಯಿಸಿ (+)