ಬುಧವಾರ, ಮೇ 12, 2021
19 °C

ದೂರಗಾಮಿ ಕ್ಷಿಪಣಿ ಪ್ರತಿಬಂಧಕ ವ್ಯವಸ್ಥೆ ಅಭಿವೃದ್ಧಿ: ಡಿಆರ್‌ಡಿಒ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಚೀನಾ ಸೇರಿದಂತೆ ಇತರ ರಾಷ್ಟ್ರಗಳ ಸಂಭಾವ್ಯ ದಾಳಿಗಳನ್ನು ಹತ್ತಿಕ್ಕುವ ನಿಟ್ಟಿನಲ್ಲಿ, 5,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ದಾಳಿಯನ್ನು ತಡೆಯುವಂತಹ ಸಾಮರ್ಥ್ಯ ಹೊಂದಿರುವ ರಕ್ಷಣಾ ವ್ಯವಸ್ಥೆಯನ್ನು ಭಾರತ ಅಭಿವೃದ್ಧಿ ಪಡಿಸುತ್ತಿದೆ.ಅಭಿವೃದ್ಧಿ ಪಡಿಸಲಾಗುತ್ತಿರುವ ಹೊಸ ಸಾಮರ್ಥ್ಯವು ಭಾರತದ ಖಂಡಾಂತರ ಕ್ಷಿಪಣಿ ರಕ್ಷಣಾ (ಬಿಎಂಡಿ) ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು (ಡಿಆರ್‌ಡಿಒ) ಹೊಸ ಬಿಎಂಡಿ ವ್ಯವಸ್ಥೆಯನ್ನು ಅಭಿವೃದ್ಧಿ ಪಡಿಸುತ್ತಿದೆ. ಇದರ ಪ್ರಥಮ ಹಂತವು ಅಳವಡಿಕೆಗೆ ಸಿದ್ಧವಾಗಿದೆ.ಮೊದಲಿಗೆ ದೆಹಲಿಯಲ್ಲಿ ಈ ವ್ಯವಸ್ಥೆ ಸ್ಥಾಪಿಸುವ ನಿರೀಕ್ಷೆ ಇದೆ.ಡಿಆರ್‌ಡಿಒ ಮುಖ್ಯಸ್ಥ ಅವಿನಾಶ್ ಚಂದರ್ ಅವರು ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಈ ವಿಷಯವನ್ನು ತಿಳಿಸಿದ್ದಾರೆ.ಮೊದಲ ಹಂತದ ವ್ಯವಸ್ಥೆಯನ್ನು  ಬಳಸಿಕೊಂಡು 2,000 ಕಿ.ಮೀ ದೂರದಿಂದ ಉಡಾಯಿಸಲಾದ ಕ್ಷಿಪಣಿಗಳನ್ನು ಪ್ರತಿಬಂಧಿಸಬಹುದಾಗಿದೆ ಎಂದು ಅವರು ಹೇಳಿದ್ದಾರೆ.ಸಂಸ್ಥೆಯು ಸದ್ಯ 2ನೇ ಹಂತದ ವ್ಯವಸ್ಥೆಯ ಅಭಿವೃದ್ಧಿಯಲ್ಲಿ ನಿರತವಾಗಿದೆ.ಇದನ್ನು ಬಳಸಿ 5,000 ಕಿ.ಮೀ ದೂರದಿಂದ ದೇಶದತ್ತ ಧಾವಿಸುವ ಕ್ಷಿಪಣಿಗಳನ್ನು ತಡೆಯಬಹುದು ಎಂದು ಅವರು ತಿಳಿಸಿದ್ದಾರೆ.`ಎರಡನೇ ಹಂತದ ವ್ಯವಸ್ಥೆಯ ಮೊದಲ ಪ್ರಯೋಗಾರ್ಥ ಪರೀಕ್ಷೆಯನ್ನು ಶೀಘ್ರದಲ್ಲಿ ನಡೆಸಲು ಯೋಚಿಸುತ್ತಿದ್ದೇವೆ' ಎಂದು ಅವಿನಾಶ್ ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.