ಶುಕ್ರವಾರ, ಮೇ 7, 2021
20 °C

`ದೂರದೃಷ್ಟಿ, ಸದುದ್ದೇಶದ ಸಲಹೆ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭವಿಷ್ಯದಲ್ಲಿ ಈ ಭಾಗದಲ್ಲಿ ಸಂಚಾರ ದಟ್ಟಣೆ ಕಾಣಿಸಿಕೊಳ್ಳಬಾರದು ಎಂಬ ಸದುದ್ದೇಶದಿಂದ `ನಮ್ಮ ಮೆಟ್ರೊ' ಎರಡನೇ ಹಂತದ ಯೋಜನೆಯಲ್ಲಿ ಬೈಯಪ್ಪನಹಳ್ಳಿಯಿಂದ ವೈಟ್‌ಫೀಲ್ಡ್‌ವರೆಗಿನ ಮಾರ್ಗದ ಪಥವನ್ನು ಬದಲಾಯಿಸುವಂತೆ ಸಲಹೆ ನೀಡಿದ್ದೆ ಎಂದು ಮಹದೇವಪುರ ಕ್ಷೇತ್ರದ ಶಾಸಕ ಅರವಿಂದ ಲಿಂಬಾವಳಿ ತಿಳಿಸಿದರು.ತಮ್ಮನ್ನು ಸಂಪರ್ಕಿಸಿದ `ಪ್ರಜಾವಾಣಿ'ಯೊಂದಿಗೆ ಮಾತನಾಡಿದ ಅವರು, `ಹೂಡಿ ತನಕ ಮಾರ್ಗ ವಿಸ್ತರಣೆ ಮಾಡಿರುವುದರಿಂದ ಹೆಚ್ಚಿನ ಜನರಿಗೆ ಅನುಕೂಲವಾಗಲಿದೆ' ಎಂದರು.`ಎರಡನೇ ಹಂತದ ವಿವರವಾದ ಯೋಜನಾ ವರದಿಯ (ಡಿಪಿಆರ್) ಪ್ರಕಾರ ಮಾರ್ಗ ನಿರ್ಮಿಸಿದರೆ ಕೆಆರ್‌ಪುರ ಮತ್ತು ಮಹದೇವಪುರ ನಡುವೆ ಸಂಚಾರ ದಟ್ಟಣೆ ಹೆಚ್ಚಾಗುತ್ತಿತ್ತು. ಕೆಆರ್‌ಪುರದಲ್ಲಿ ತೂಗು ಸೇತುವೆ ನಿರ್ಮಿಸಿದರೂ ಸಂಚಾರ ದಟ್ಟಣೆಯ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ. ಅದೇ ರೀತಿ ಮೆಟ್ರೊ ಮಾರ್ಗದಿಂದ ಸಮಸ್ಯೆ ಆಗಬಾರದು ಎಂಬ ಉದ್ದೇಶದಿಂದ ಪಥ ಬದಲಾವಣೆಗೆ ಸೂಕ್ತ ಸಲಹೆಗಳನ್ನು ನೀಡಲಾಗಿತ್ತು' ಎಂದು ಹೇಳಿದರು.`ಪಥ ಬದಲಾವಣೆಗೆ ಸಲಹೆ ನೀಡಿರುವುದರ ಹಿಂದೆ ಯಾವುದೇ ವೈಯಕ್ತಿಕ ಹಿತಾಸಕ್ತಿ ಇಲ್ಲ. ನನ್ನ ಮನವಿ ಮೇರೆಗೆ ಆಗಿನ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಕರೆದಿದ್ದ ಸಭೆಯಲ್ಲಿ ಬಿಬಿಎಂಪಿ, ರೈಲ್ವೆ ಮತ್ತು ಮೆಟ್ರೊ ನಿಗಮದ ಅಧಿಕಾರಿಗಳೊಂದಿಗೆ ಸುದೀರ್ಘವಾಗಿ ಚರ್ಚಿಸಲಾಯಿತು. ಅದರ ಫಲವಾಗಿ ಪಥ ಬದಲಾವಣೆ ಮಾಡಲಾಗಿದೆ' ಎಂದು ಅವರು ಸ್ಪಷ್ಟಪಡಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.