ಶನಿವಾರ, ಜೂನ್ 19, 2021
29 °C

ದೂರ ಉಳಿದ ಬಾಲಕಿಯರು: ಆತಂಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗೌರಿಬಿದನೂರು: ಗ್ರಾಮೀಣ ಪ್ರದೇಶಗಳಲ್ಲಿ ಬಾಲಕಿಯರು ಹೆಚ್ಚಿನ ಸಂಖ್ಯೆಯಲ್ಲಿ ಶಾಲೆಯಿಂದ ದೂರ ಉಳಿಯುತ್ತಿದ್ದಾರೆ ಎಂದು ತಾಲ್ಲೂಕಿನ ಪುರ ಕ್ಲಸ್ಟರ್‌ನ ಸಂಪನ್ಮೂಲ ಶಿಕ್ಷಕ ವೆಂಕಟಾಚಲಪತಿ ಅಭಿಪ್ರಾಯಪಟ್ಟರು.ತಾಲ್ಲೂಕಿನ ಮಂಚೇನಹಳ್ಳಿ ಹೋಬಳಿ ಭೂಮೇನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ನಡೆದ `ಮೀನಾ ಮೇಳ~ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, `ಮೀನಾ ತಂಡಗಳನ್ನು ರಚಿಸುವ ಮೂಲಕ ವಿದ್ಯಾರ್ಥಿನಿಯರಲ್ಲಿ ವೃತ್ತಿ ಕೌಶಲ್ಯದ ತರಬೇತಿ ನೀಡಬೇಕಿದೆ~ ಎಂದರು.ವಿದ್ಯಾರ್ಥಿನಿಯರಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸುಂದರ ಜೀವನ ರೂಪಿಸಬೇಕಿದೆ. ಟೈಲರಿಂಗ್, ಬ್ಯೂಟಿಷಿಯನ್, ಕರಾಟೆ, ಕ್ಯಾಂಡಲ್, ನಾಟಕ ಮುಂತಾದವುಗಳ ಕುರಿತು ತರಬೇತಿ ನೀಡುವುದರ ಮೂಲಕ ಬಾಲಕಿಯರಿಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಮಾರ್ಗದರ್ಶನ ನೀಡಬಹುದು ಎಂದು ತಿಳಿಸಿದರು.ಮಿಣಕನಗುರ್ಕಿ, ಜರಬಂಡಹಳ್ಳಿ ಮತ್ತು ಭೂಮೇನಹಳ್ಳಿ ಶಾಲೆಯ ಮಕ್ಕಳು ಕರಾಟೆ ಮತ್ತು ನೃತ್ಯ ಪ್ರದರ್ಶಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ರಾಧಮ್ಮ, ಭೂಮೇನಹಳ್ಳಿ ಶಾಲೆಯ ಮುಖ್ಯ ಶಿಕ್ಷಕಿ ಮುನಿಲಕ್ಷಮ್ಮ, ಸಹ ಶಿಕ್ಷಕಿ ಸಂಧ್ಯಾ, ತಾಲ್ಲೂಕು ಶಿಕ್ಷಕರ ಸಂಘದ ಉಪಾಧ್ಯಕ್ಷ ಚಾಂದ್‌ಪಾಷ, ಶಿಕ್ಷಕರಾದ ನಾಗರಾಜ್, ಅಂಬರೀಶ್, ಮಂಜುನಾಥ್, ಲಕ್ಷ್ಮಿ ಉಪಸ್ಥಿತರಿದ್ದರು.ಸರ್ಕಾರದ ನೆರವಿನ ಸದುಪಯೋಗಕ್ಕೆ ಕರೆ

ಬಾಗೇಪಲ್ಲಿ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ನೆರವು ಒದಗಿಸಿದೆ. ಇದನ್ನು ಸದುಪಯೋಗಪಡಿಸಿಕೊಂಡು ಬಾಲಕಿಯರು ಉತ್ತಮ ವಿದ್ಯಾಭ್ಯಾಸ ಪಡೆಯಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ವಿ.ಕೃಷ್ಣಪ್ಪ ತಿಳಿಸಿದರು.ತಾಲ್ಲೂಕಿನ ಮಿಟ್ಟೇಮರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ನಡೆದ ಕೇಂದ್ರ ಮಟ್ಟದ ಅಂತರ ಶಾಲಾ `ಮೀನಾ ಮೇಳ~ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಪದವಿ ತರಗತಿಗಳಲ್ಲಿ ಉತ್ತಮ ಅಂಕಗಳನ್ನು ಪಡೆಯಬೇಕು ಎಂದು ಕರೆ ನೀಡಿದರು.ಗ್ರಾಮಾಂತರ ಪ್ರದೇಶಗಳಲ್ಲಿ ಹೆಣ್ಣು ಮಕ್ಕಳು ಶಿಕ್ಷಣ ಕಲಿತು, ಅನಕ್ಷರಸ್ಥರಿಗೆ ವಿದ್ಯೆ ಹೇಳಿ ಕೊಡುವ ಮೂಲಕ ಸಾಕ್ಷರತೆ ಹರಡಲು ಸಹಕರಿಸಬೇಕು. ಗ್ರಾಮಾಂತರ ಪ್ರದೇಶಗಳಲ್ಲಿ ಸಾಕ್ಷರತಾ ಆಂದೋಲನ ಹಾಗೂ ಜನಜಾಗೃತಿ ಇನ್ನಷ್ಟು ಹೆಚ್ಚಬೇಕಿದೆ ಎಂದು ಅಭಿಪ್ರಾಯಪಟ್ಟರು.ಕಾರ್ಯಕ್ರಮದ ಅಂಗವಾಗಿ ನಡೆದ ನಾಟಕ, ಅಣುಕು ಪ್ರದರ್ಶನ, ಗ್ರಾಮಸಭೆ ಹಾಗೂ ಚರ್ಚಾ ಸ್ಫರ್ಧೆಯಲ್ಲಿ ವಿದ್ಯಾರ್ಥಿನಿಯರು ಉತ್ಸಾಹದಿಂದ ಪಾಲ್ಗೊಂಡರು. ವಿವಿಧ ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಿದ ವಿದ್ಯಾರ್ಥಿಗಳಿಗೆ ಮಿಟ್ಟೇಮರಿ ಪ್ರೌಢಶಾಲೆಯ ಪ್ರಭಾವಿ ಮುಖ್ಯ ಶಿಕ್ಷಕಿ ಸಿ.ಪದ್ಮಾವತಮ್ಮ ಬಹುಮಾನ ವಿತರಿಸಿದರು.ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷೆ ಅಮರಾವತಿ, ಗ್ರಾಮ ಪಂಚಾಯಿತಿ ಸದಸ್ಯ ಕಾಮರೆಡ್ಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಧ್ಯಕ್ಷ ನಾರಾಯಣಸ್ವಾಮಿಶೆಟ್ಟಿ, ಮುಖ್ಯ ಶಿಕ್ಷಕ ಡಿ.ಎಂ.ಚೌಡಪ್ಪ, ಡಿಜಿಸಿಓ ಲಕ್ಷ್ಮೀ, ಬಿಜಿಸಿಓ ಕೋಮಲ, ಶಿಕ್ಷಕರಾದ ಎನ್.ಜಯರಾಮರೆಡ್ಡಿ, ಕೆ.ಎನ್.ಕೃಷ್ಣಪ್ಪ, ನಂಜುಂಡಪ್ಪ ಮತ್ತಿತರರು ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.