ಮಂಗಳವಾರ, ಏಪ್ರಿಲ್ 20, 2021
25 °C

ದೆಹಲಿಗೆ ನಿಯೋಗ: ಸರ್ವಪಕ್ಷ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಂವಿಧಾನದ 371ನೇ ವಿಧಿಗೆ ತಿದ್ದುಪಡಿ ಮಾಡಿ ಹೈದರಾಬಾದ್ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ದೆಹಲಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯುವ ಸಂಬಂಧ ಎರಡು ದಿನಗಳಲ್ಲಿ ಪ್ರತಿಪಕ್ಷ ನಾಯಕರ ಸಭೆ ಕರೆದು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ವಿಧಾನಸಭೆಗೆ ತಿಳಿಸಿದರು.ಶೂನ್ಯವೇಳೆಯಲ್ಲಿ ಜೆಡಿಎಸ್‌ನ ವೆಂಕಟರಾವ್ ನಾಡಗೌಡ ಅವರು ವಿಷಯ ಪ್ರಸ್ತಾಪಿಸಿ, ಹೈದರಾಬಾದ್ ಕರ್ನಾಟಕ ತೀರಾ ಹಿಂದುಳಿದಿದ್ದು, ವಿಶೇಷ ಸ್ಥಾನಮಾನಕ್ಕೆ ಒತ್ತಾಯಿಸಿ ದೆಹಲಿಗೆ ನಿಯೋಗ ಕರೆದೊಯ್ಯಬೇಕೆಂದು ಒತ್ತಾಯಿಸಿದರು.ಇದಕ್ಕೆ ಉತ್ತರಿಸಿದ ಯಡಿಯೂರಪ್ಪ, ಕೇಂದ್ರ ಸರ್ಕಾರದ ಧೋರಣೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ದೆಹಲಿ ಭೇಟಿ ಬಗ್ಗೆ ಎರಡು ದಿನಗಳಲ್ಲಿ ಸರ್ವಪಕ್ಷಗಳ ಮುಖಂಡರ ಸಭೆ ಕರೆದು ಚರ್ಚಿಸಲಾಗುವುದು. ನಂತರ ನಿಯೋಗ ತೆರಳಿ ಪ್ರಧಾನಿ ಮತ್ತು ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಲಾಗುವುದು ಎಂದರು.ಈ ಹಿಂದೆಯೂ ವಿಶೇಷ ಸ್ಥಾನಮಾನ ನೀಡುವುದರ ಬಗ್ಗೆ ವಿಧಾನಮಂಡಲದಲ್ಲಿ ಸರ್ವಾನುಮತದ ತೀರ್ಮಾನವಾಗಿತ್ತು. ಆದರೆ, ಕೇಂದ್ರ ಸರ್ಕಾರ ಅದನ್ನು ತಿರಸ್ಕರಿಸಿತ್ತು. ಆ ಭಾಗದ ಜನರ ತಾಳ್ಮೆಯನ್ನು ಪರೀಕ್ಷಿಸಬಾರದು ಎಂದು ಹೇಳಿದರು.ಸಂಸತ್ತಿನ ಅಧಿವೇಶನ ಇದೇ 15ರವರೆಗೆ ಇರುತ್ತದೆ. ಈ ಅವಧಿಯಲ್ಲೇ ಸರ್ವಪಕ್ಷ ಮುಖಂಡರು, ರಾಜ್ಯದ ಕೇಂದ್ರ ಸಚಿವರು ಮತ್ತು ಸಂಸದರ ನಿಯೋಗವನ್ನು ಕರೆದೊಯ್ಯಲಾಗುವುದು. ವಿಶೇಷ ಸ್ಥಾನಮಾನ ಕೊಡಲೇಬೇಕೆಂದು ಒತ್ತಾಯ ಮಾಡೋಣ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.