ಶುಕ್ರವಾರ, ಮೇ 14, 2021
21 °C

ದೆಹಲಿಗೆ ನಿಯೋಗ: 12ಕ್ಕೆ ಸರ್ವಪಕ್ಷ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ಕಾವೇರಿ, ಹೋಗೆನಕಲ್ ಯೋಜನೆ ವಿವಾದ, ಬರಗಾಲ, ರೇಷ್ಮೆ, ತೊಗರಿ ಬೆಳೆಗಾರರ ಸಮಸ್ಯೆ ಇತ್ಯಾದಿಗಳ ಬಗ್ಗೆ ಕೇಂದ್ರದ ಗಮನ ಸೆಳೆಯಲು ನವದೆಹಲಿಗೆ ನಿಯೋಗ ಕರೆದೊಯ್ಯವ ಕುರಿತು ಚರ್ಚಿಸಲು ಇದೇ 12ರಂದು ಸರ್ವಪಕ್ಷಗಳ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ತಿಳಿಸಿದರು.ಸರ್ವಪಕ್ಷಗಳ ಸಭೆಯಲ್ಲಿ ನಿಯೋಗ ಕರೆದುಕೊಂಡು ಹೋಗುವ ದಿನಾಂಕವನ್ನು ಅಂತಿಮಗೊಳಿಸಲಾಗುವುದು. ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸಲಾಗುವುದು ಎಂದರು.ನಗರದಲ್ಲಿ ಶುಕ್ರವಾರ ಚೌಡೇಶ್ವರಿ ದೇವಿಯ ಬ್ರಹ್ಮೋತ್ಸವಕ್ಕೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್‌ನಲ್ಲಿ ನಡೆಯುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಉದ್ಯಮಿಗಳನ್ನು ಆಹ್ವಾನಿಸಲು ಇದೇ 15ರ ನಂತರ ವಿದೇಶ ಪ್ರವಾಸ ಕೈಗೊಳ್ಳುವುದಾಗಿ ಹೇಳಿದರು.ಅಮೆರಿಕಾ ಸೇರಿದಂತೆ ವಿವಿಧ ದೇಶಗಳಲ್ಲಿ ರೋಡ್‌ಷೋ ನಡೆಸಿ ಹೂಡಿಕೆದಾರರನ್ನು ಆಕರ್ಷಿಸಲು ನಿರ್ಧರಿಸಲಾಗಿದೆ. ಮುಂಬೈ, ದೆಹಲಿ ಸೇರಿದಂತೆ ದೇಶದ ಹಲವೆಡೆ ಈಗಾಗಲೇ ಹೂಡಿಕೆದಾರರ ಸಮಾವೇಶಗಳು ನಡೆದಿವೆ. ಈಗ ವಿದೇಶಗಳತ್ತ ಚಿತ್ತ ಹರಿಸಲಾಗಿದೆ ಎಂದರು.ಬರ: 9ರಂದು ಸಿಎಂಗೆ ವರದಿ-ಬಿಎಸ್‌ವೈದೇವದುರ್ಗ:  ತೀವ್ರ ಬರ ಪರಿಸ್ಥಿತಿಯಿಂದ ಸಂಕಷ್ಟ ಎದುರಿಸುತ್ತಿರುವ ಜಿಲ್ಲೆಗಳಿಗೆ ಭೇಟಿ ನೀಡಿ ಜನತೆಯ ಸಮಸ್ಯೆ, ಪರಿಸ್ಥಿತಿ ಕುರಿತು ವಾಸ್ತವಿಕ ವರದಿಯನ್ನು ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರಿಗೆ ಇದೇ 9ರಂದು ತಾವು ಸಲ್ಲಿಸುವುದಾಗಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.  ಯಡಿಯೂರಪ್ಪ ಹೇಳಿದರು.ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬರಗಾಲ ವಿಚಾರದಲ್ಲಿ ರಾಜಕೀಯ ಸಲ್ಲ ಎಂದರು.

ಕೊಪ್ಪಳ, ಗದಗ ಜಿಲ್ಲೆಯಲ್ಲಿ ಪ್ರವಾಸ ಮುಗಿಸಿದ್ದೇನೆ. ಅಲ್ಲಿನ ಅಧಿಕಾರಿಗಳು ಸಮರ್ಪಕ ಮತ್ತು ಸಮಾಧಾನ ರೀತಿ ಕೆಲ ಕೆಲಸ ಕಾರ್ಯ ಕೈಗೊಂಡಿದ್ದಾರೆ. ಬೇರೆ ಜಿಲ್ಲೆಯಲ್ಲಿನ ಆಡಳಿತ ಯಂತ್ರವೂ ಅದೇ ರೀತಿ ಕಾರ್ಯನಿರ್ವಹಿಸಿದರೆ ಜನ-ಜಾನುವಾರುಗಳಿಗೆ ಸಹಾಯವಾಗುತ್ತದೆ ಎಂದರು.ರಾಜ್ಯದಲ್ಲಿ ತೀವ್ರ ಬರಪರಿಸ್ಥಿತಿಯಿಂದ ಜನತೆ ತೊಂದರೆ ಪಡುತ್ತಿದ್ದಾರೆ. ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೇಂದ್ರ ಸರ್ಕಾರದಿಂದ ಇನ್ನೂ 400 ಕೋಟಿ ಅನುದಾನ ರಾಜ್ಯಕ್ಕೆ ದೊರಕಬೇಕು. ಇದು ವಿಳಂಬ ಆಗುತ್ತಿದೆ. ಈ ಯೋಜನೆ ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರವು ಕಾಯ್ದಿರಿಸಿದ ತನ್ನ ಪಾಲಿನ 200 ಕೋಟಿ ಹಣವನ್ನು ತುರ್ತು ಪರಿಹಾರ ಕಾರ್ಯಕ್ಕೆ ಬಳಸಿಕೊಂಡರೆ ಸಂಕಷ್ಟದಲ್ಲಿರುವ ಜನತೆಗೆ ಸಹಾಯ ಆಗುತ್ತದೆ ಎಂದು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.