ಭಾನುವಾರ, ಏಪ್ರಿಲ್ 11, 2021
23 °C

ದೆಹಲಿಗೆ ಬರಲು ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪಕ್ಷದಲ್ಲಿ ಇತ್ತೀಚೆಗೆ ನಡೆದ ಬೆಳವಣಿಗೆಗಳು ಮತ್ತು ರಾಜ್ಯ ರಾಜಕೀಯದಲ್ಲಿನ ವಿದ್ಯಮಾನಗಳ ಕುರಿತು ಚರ್ಚಿಸಲು ಸೋಮವಾರ ದೆಹಲಿಗೆ ಬರುವಂತೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ವರಿಷ್ಠರು ಸೂಚನೆ ನೀಡಿದ್ದಾರೆ.ಸೋಮವಾರ ಬೆಳಿಗ್ಗೆಯೇ ಇಬ್ಬರೂ ನಾಯಕರು ದೆಹಲಿಗೆ ತೆರಳುವರು. ರಾಜ್ಯದಲ್ಲಿ ಪಕ್ಷ ಬಲಡಿಸುವುದು, ಚುನಾವಣಾ ತಯಾರಿ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ನಾಯಕತ್ವದಲ್ಲಿ ಬದಲಾವಣೆ ಬೇಡಿಕೆ ಹೆಚ್ಚುತ್ತಿರುವುದು ಸೇರಿದಂತೆ ಪಕ್ಷದ ಆಂತರಿಕ ವಲಯದಲ್ಲಿ ಇತ್ತೀಚೆಗೆ ನಡೆದ ಹಲವು ಬೆಳವಣಿಗೆಗಳ ವಿಷಯವೂ ಚರ್ಚೆಗೆ ಬರುವ ಸಂಭವವಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.