ಬುಧವಾರ, ಜೂನ್ 23, 2021
21 °C

ದೆಹಲಿಯಲ್ಲಿ ಯಡಿಯೂರಪ್ಪ: ಇಂದು ಬೆಂಬಲಿಗ ಸಂಸದರ ಸಭೆ ಸಾಧ್ಯತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಹುಬ್ಬಳ್ಳಿಯಲ್ಲಿ ಭಾನುವಾರ ಅಭಿನಂದನಾ ಸಮಾರಂಭದ ಹೆಸರಿನಲ್ಲಿ ಬಲ ಪ್ರದರ್ಶನ ಮಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವರಿಷ್ಠರ ಮೇಲೆ ಒತ್ತಡ ಮುಂದುವರಿಸಲು ಬುಧವಾರ ರಾಜಧಾನಿಯಲ್ಲಿ ತಮಗೆ ನಿಷ್ಠರಾಗಿರುವ ಸಂಸತ್ ಸದಸ್ಯರ  ಸಭೆ ಕರೆಯುವ ಸಾಧ್ಯತೆಗಳಿವೆ.

ಮಂಗಳವಾರ ಸಂಜೆ ರಾಜಧಾನಿಗೆ ಆಗಮಿಸಿದ ಯಡಿಯೂರಪ್ಪ ಅಜ್ಞಾತ ಸ್ಥಳಕ್ಕೆ ತೆರಳಿದರು. ಬುಧವಾರ ಬೆಳಿಗ್ಗೆ ವೈಷ್ಣೋದೇವಿಗೆ ತೆರಳಿ ಸಂಜೆ ಮರಳುವರು. ಅನಂತರ ಸಂಸದರ ಸಭೆ ಕರೆಯುವ ಸಂಭವವಿದೆ.

`ನಾನು ವರಿಷ್ಠರನ್ನು ಭೇಟಿ ಮಾಡುವುದಿಲ್ಲ. ಯಾವುದೇ ಸ್ಥಾನಮಾನ ಕೇಳುವುದಿಲ್ಲ. ದೇವರ ದರ್ಶನಕ್ಕೆ ಬಂದಿದ್ದೇನೆ. ಸಾಧ್ಯವಾದರೆ ಸಂಸತ್ ಸದಸ್ಯರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ~ ಎಂದರು.

ರಾಜ್ಯದ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಪೂರೈಸುವಂತೆ ಕೇಂದ್ರಕ್ಕೆ ಮನವಿ ಮಾಡಲು ದೆಹಲಿಗೆ ಬಂದಿರುವ ಇಂಧನ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯದ ರಾಜಕೀಯ ಬೆಳವಣಿಗೆ ಕುರಿತು ಮಾತನಾಡಲು ನಿರಾಕರಿಸಿದರು. ಯಡಿಯೂರಪ್ಪ ಅವರ ಜತೆ ವಿಧಾನ ಪರಿಷತ್ ಸದಸ್ಯ ಲೇಹರ್‌ಸಿಂಗ್ ಆಗಮಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.