ದೆಹಲಿ ಅತ್ಯಾಚಾರ ಖಂಡಿಸಿ ಪ್ರತಿಭಟನೆ

7

ದೆಹಲಿ ಅತ್ಯಾಚಾರ ಖಂಡಿಸಿ ಪ್ರತಿಭಟನೆ

Published:
Updated:
ದೆಹಲಿ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಮೈಸೂರು: ದೆಹಲಿ ಸಾಮೂಹಿಕ ಅತ್ಯಾಚಾರಕ್ಕೆ ಪ್ಯಾರ ಮೆಡಿಕಲ್ ವಿದ್ಯಾರ್ಥಿನಿ ಮೃತಪಟ್ಟ ಘಟನೆಯನ್ನು ಖಂಡಿಸಿ ವಿವಿಧ ಸಂಘಟನೆಗಳು ನಗರದಲ್ಲಿ ಗುರುವಾರ ಪ್ರತಿಭಟನೆ ಮಾಡಿದವು.

ನಗರದ ದೇವರಾಜ ಪದವಿಪೂರ್ವ ಕಾಲೇಜು ಮತ್ತು ಮಹಾರಾಣಿ ಜೂನಿಯರ್ ಕಾಲೇಜಿನ ವಿದ್ಯಾರ್ಥಿನಿಯರು ತರಗತಿಗಳನ್ನು ಬಹಿಷ್ಕರಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಿದರು. ಅತ್ಯಾಚಾರ ಎಸಗಿದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ದೇಶದಲ್ಲಿ ಅತ್ಯಾಚಾರ, ಮಹಿಳೆಯರ ಮೇಲೆ ದೌರ್ಜನ್ಯ, ಕಿರುಕುಳ ಪ್ರಕರಣಗಳು ದಿನೆ ದಿನೇ ಹೆಚ್ಚಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಕಾನೂನು ಬಿಗಿಗೊಳಿಸಬೇಕು ಎಂದು ಒತ್ತಾಯಿಸಿದರು.ದೇಶದಲ್ಲಿ ಇಂತಹ ಪ್ರಕರಣಗಳು ಮತ್ತೆ ಜರುಗದಂತೆ ಕಟ್ಟೆಚ್ಚರ ವಹಿಸಬೇಕು. ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಬಸ್‌ನಲ್ಲಿ ಪ್ರಯಾಣ ಮಾಡುತ್ತಿರುವಾಗಲೇ ಯುವಕರ ಗುಂಪು ಅತ್ಯಾಚಾರ ಎಸಗಿದ್ದು, ಇಡೀ ದೇಶ ತಲೆತಗ್ಗಿಸುವಂತಹ ಕೆಲಸ. ಒಂದೆಡೆ ಮಹಿಳೆಗೆ ಸೂಕ್ತ ಸ್ಥಾನಮಾನ ನೀಡುವ ನಿಟ್ಟಿನಲ್ಲಿ ಚರ್ಚೆ, ಕಾನೂನುಗಳು ರಚನೆಯಾಗುತ್ತಿದ್ದರೆ ಮತ್ತೊಂದೆಡೆ ಅತ್ಯಾಚಾರ, ದೌರ್ಜನ್ಯ ಪ್ರಕರಣಗಳು ನಿರಂತರವಾಗಿ ನಡೆಯುತ್ತಲೇ ಇದೆ. ನಾಗರಿಕ ಸಮಾಜದಲ್ಲಿ ಪುರುಷ-ಮಹಿಳೆಗೆ ಸಮಾನತೆ ಇನ್ನೂ ದೊರಕಿಲ್ಲ. ಅದು ದೊರಕುವವರೆಗೂ ಮಹಿಳೆಯರಿಗೆ ನ್ಯಾಯ ದೊರಕುವುದಿಲ್ಲ ಎಂದು ವಿದ್ಯಾರ್ಥಿನಿಯರು ಆಕ್ರೋಶ ವ್ಯಕ್ತಪಡಿಸಿದರು.ಮೈಸೂರು ಕನ್ನಡ ವೇದಿಕೆ: ದೆಹಲಿ ಅತ್ಯಾಚಾರ ಖಂಡಿಸಿ ಮೈಸೂರು ಕನ್ನಡ ವೇದಿಕೆ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಿದರು. ಸ್ವಾತಂತ್ರ ಬಂದು 65 ವರ್ಷಗಳಾದರೂ ಮಹಿಳೆಯರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಖಂಡನೀಯ. ಮಹಿಳೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾನೂನಿಗೆ ತಿದ್ದುಪಡಿ ತರುವ ಅಗತ್ಯ ಇದೆ. ಈ ಬಗ್ಗೆ ಕೇಂದ್ರ ಸರ್ಕಾರ ಎಚ್ಚತ್ತುಕೊಳ್ಳಬೇಕು.ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಇದರಿಂದ ಇತರರಿಗೆ ಪಾಠ ಕಲಿಸಿದಂತಾಗುತ್ತದೆ ಎಂದು ಪ್ರತಿಭಟನಾಕಾರರು ತಿಳಿಸಿದರು.

ವೇದಿಕೆ ಅಧ್ಯಕ್ಷ ಎಸ್.ಬಾಲಕೃಷ್ಣ, ನಾಲಾಬೀದಿ ರವಿ, ಸಾ.ವಿ.ಮಲ್ಲಿಕಾರ್ಜುನ್, ಬಸವರಾಜು, ಮಹದೇವಸ್ವಾಮಿ, ಉತ್ತನಹಳ್ಳಿ ಮಹದೇವ್ ಅಜಯ್‌ಕುಮಾರ್ ಜೈನ್, ಅರವಿಂದ್, ಗಿರೀಶ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry