ದೆಹಲಿ: ಅತ್ಯಾಚಾರ ಪ್ರಕರಣಗಳ ಸಂಖ್ಯೆ ಏರಿಕೆ

7

ದೆಹಲಿ: ಅತ್ಯಾಚಾರ ಪ್ರಕರಣಗಳ ಸಂಖ್ಯೆ ಏರಿಕೆ

Published:
Updated:

ನವದೆಹಲಿ (ಪಿಟಿಐ): ದೇಶದ ರಾಜಧಾನಿ ನವದೆಹಲಿಯಲ್ಲಿ ಪ್ರಸಕ್ತ ವರ್ಷದ ಡಿಸೆಂಬರ್ ಹೊತ್ತಿಗೆ 661 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಪ್ರಮಾಣ ಶೇ 17ರಷ್ಟು ಹೆಚ್ಚಾಗಿದೆ.`ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳ ವಿರುದ್ಧ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ದೂರು ದಾಖಲಿಸುವ ಮೂಲಕ ತಮ್ಮ ಮೇಲೆ ನಡೆಯುವ ಅಮಾನುಷ ಕೃತ್ಯದ ವಿರುದ್ಧ ದನಿ ಎತ್ತುತ್ತಿದ್ದಾರೆ' ಎಂದು ದೆಹಲಿ ಪೊಲೀಸ್ ಆಯುಕ್ತ ನೀರಜ್ ಕುಮಾರ್ ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ದೆಹಲಿಯಲ್ಲಿ ಅತ್ಯಾಚಾರ ಸಂಬಂಧ 2011ರಲ್ಲಿ 564, 2010ರಲ್ಲಿ 489, 2009ರಲ್ಲಿ 459, 2008ರಲ್ಲಿ 466 ಹಾಗೂ 2006ರಲ್ಲಿ 609 ಪ್ರಕರಣಗಳು ದಾಖಲಾಗಿವೆ.2005ರಲ್ಲಿ ಒಂದು ಲಕ್ಷ ಜನಸಂಖ್ಯೆಗೆ ಶೇ 4.42ರಷ್ಟಿದ್ದ ಅತ್ಯಾಚಾರ ಪ್ರಕರಣಗಳ ಪ್ರಮಾಣ, 2011ರಲ್ಲಿ ಶೇ 3.39ಕ್ಕೆ ಇಳಿದಿದೆ ಎಂದು ದೆಹಲಿಯ ಪೊಲೀಸ್ ಇಲಾಖೆಯ ಅಂಕಿಅಂಶಗಳು ಹೇಳುತ್ತವೆ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry