ಭಾನುವಾರ, ಮಾರ್ಚ್ 7, 2021
30 °C
ಕಾಶ್ಮೀರ ಕಟ್ಟೆಚ್ಚರ

ದೆಹಲಿ, ಕಾಶ್ಮೀರದಲ್ಲಿ ಕಟ್ಟೆಚ್ಚರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೆಹಲಿ, ಕಾಶ್ಮೀರದಲ್ಲಿ ಕಟ್ಟೆಚ್ಚರ

ನವದೆಹಲಿ (ಪಿಟಿಐ): 70ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಿಂದ ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದು, ದೇಶದ ರಾಜಧಾನಿ ಮತ್ತು ಗಲಭೆಪೀಡಿತ ಕಾಶ್ಮೀರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.ಸಚಿವರು, ವಿದೇಶಿ ಗಣ್ಯರು ಮತ್ತು ಬಾರಿ ಸಂಖ್ಯೆಯಲ್ಲಿ ವೀಕ್ಷಕರು ಸೇರಲಿರುವ ಕೆಂಪು ಕೋಟೆಯ ಸುತ್ತಮುತ್ತ ಸಾವಿರಾರು ಪೊಲೀಸರು ಮತ್ತು ಅರೆ ಸೇನಾ ಪಡೆಯ ಯೋಧರನ್ನು ನಿಯೋಜಿಸಲಾಗಿದೆ. ಏಳು ದಿನಗಳವರೆಗೆ ‘ಭಾರತ ಪರ್ವ’ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿರುವ ರಾಜಪಥ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಹು ಹಂತದ ಭದ್ರತಾ ವ್ಯವಸ್ಥೆ ಮಾಡಲಾಗಿದೆ.ನಾರ್ಥ್ ಮತ್ತು ಸೌಥ್‌ ಬ್ಲಾಕ್ ಕಟ್ಟಡಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಿರುವುದರಿಂದ ಅದನ್ನು ವೀಕ್ಷಿಸಲು ರಾತ್ರಿ ಸಾವಿರಾರು ಜನರು ಸೇರುತ್ತಾರೆ. ಹೀಗಾಗಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.ಕಾಶ್ಮೀರದಲ್ಲೂ ಭದ್ರತೆ: ಕಳೆದ ಅನೇಕ ದಿನಗಳಿಂದ ಕರ್ಫ್ಯೂ ಜಾರಿಯಲ್ಲಿ ಇರುವ ಕಣಿವೆ ರಾಜ್ಯದಲ್ಲಿ ಭಾರಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಸೇನೆ, ಅರೆಸೇನಾ ಪಡೆಗಳು ಮತ್ತು ಪೊಲೀಸರನ್ನು ರಾಜ್ಯದ ಎಲ್ಲೆಡೆ ನಿಯೋಜಿಸಲಾಗಿದೆ.ಜಮ್ಮು ಮತ್ತು ಕಾಶ್ಮೀರದ ಸ್ವಾತಂತ್ರ್ಯ ದಿನಾಚರಣೆಯ ಪ್ರಮುಖ ಸ್ಥಳವಾದ ಬಕ್ಷಿ ಕ್ರೀಡಾಂಗಣವನ್ನು ಭದ್ರತಾ ಪಡೆಗಳು ಸುತ್ತುವರಿದಿವೆ. ಬಕ್ಷಿ ಕ್ರೀಡಾಂಗಣಕ್ಕೆ ತಲುಪುವ ರಸ್ತೆಗಳನ್ನು ಪೊಲೀಸರು ಬಂದ್ ಮಾಡಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.