ಭಾನುವಾರ, ಮೇ 9, 2021
18 °C

ದೆಹಲಿ ಪಾಲಿಕೆ ಚುನಾವಣೆ: ಬಿಜೆಪಿ ಜಯಭೇರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ, (ಪಿಟಿಐ): ನವದೆಹಲಿಯ ನೂತನವಾಗಿ ರಚನೆಯಾದ ಮೂರು ಪಾಲಿಕೆಗಳಿಗೆ ನಡೆದ ಚುನಾವಣೆಯಲ್ಲಿ ಮಂಗಳವಾರ ನಡೆದ ಮತ ಎಣಿಕೆಯಲ್ಲಿ ಬಿಜೆಪಿ ಪಕ್ಷವು ಹೆಚ್ಚು ಸ್ಥಾನಗಳನ್ನು ತನ್ನದಾಗಿಸಿಕೊಳ್ಳುವುದರ ಮೂಲಕ ಪಾಲಿಕೆ ಚುನಾವಣೆಯಲ್ಲಿ ಜಯಭೇರಿ ಸಾಧಿಸಿದೆ. ಇದುವರೆಗೆ ನಡೆದ ಮತ ಎಣಿಕೆಯಲ್ಲಿ 80 ಸ್ಥಾನಗಳು ಘೋಷಣೆ ಮಾಡಲಾಗಿದೆ. ಎಲ್ಲಾ ಮೂರು ಸಂಸ್ಥೆಗಳ ಒಟ್ಟು 272 ವಾರ್ಡ್‌ಗಳಲ್ಲಿ  ಬಿಜೆಪಿಯು 49 ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ. ಕಾಂಗ್ರೆಸ್ 19 ಸ್ಥಾನಗಳನ್ನು ಪಡೆದುಕೊಂಡಿದೆ ಎಂದು ಚುನುವಣಾ ಅಧಿಕಾರಿಗಳು ತಿಳಿಸಿದ್ದಾರೆ.ಬಿಎಸ್‌ಪಿ 2, ಜೆಡಿ (ಯು) ಮತ್ತು ಐಎನ್‌ಎಲ್‌ಡಿ ತಲಾ ಒಂದು ಸ್ಥಾನ ಸೇರಿದಂತೆ ಒಟ್ಟು ಎಂಟು ಸ್ವತಂತ್ರ ಅಭ್ಯರ್ಥಿಗಳು ಜಯಗಳಿಸಿದ್ದಾರೆ. 

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ....

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.