ಗುರುವಾರ , ಮೇ 13, 2021
22 °C

ದೆಹಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ(ಐಎಎನ್‌ಎಸ್): `ಹದಿನಾಲ್ಕು ವರ್ಷದ ದೆಹಲಿಯ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಬದೌನ್‌ನಲ್ಲಿ ನಡೆದಿದೆ' ಎಂದು ಗುರುವಾರ ಪೊಲೀಸರು ತಿಳಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬನನ್ನು ಬಂಧಿಸಲಾಗಿದೆ. ನೆಬ್‌ಸರಾಯ್‌ನ ತನ್ನ ಮನೆಯಿಂದ ಬಾಲಕಿ ಜೂನ್ 5ರಂದು ಕಾಣೆಯಾಗಿದ್ದಳು. 6 ದಿನಗಳ ಬಳಿಕ  ಪೋಷಕರಿಗೆ ಕರೆ ಮಾಡಿ ಸಂಕಷ್ಟದಲ್ಲಿರುವುದಾಗಿ ಮಾಹಿತಿ ನೀಡಿದ್ದಳು.ಈ ಮಾಹಿತಿ ಆಧರಿಸಿ ಜೂನ್ 12ರಂದು ಕಾರ್ಯಾಚರಣೆ ನಡೆಸಿದ ಪೊಲೀಸರು ಬಾಲಕಿಯನ್ನು ಅಡಗಿಸಿಟ್ಟಿದ್ದ ಜಾಗಕ್ಕೆ ತೆರಳಿ ಜರಿಬ್ ಅಹಮದ್ (28) ಎಂಬಾತನನ್ನು  ಬಂಧಿಸಿ ಬಾಲಕಿಯನ್ನು ರಕ್ಷಿಸಿದ್ದಾರೆ. ಇನ್ನೊಬ್ಬ ತಪ್ಪಿಸಿಕೊಂಡಿದ್ದಾನೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.