ಶನಿವಾರ, ಫೆಬ್ರವರಿ 27, 2021
20 °C

ದೆಹಲಿ ಸಿಎಂ ಕೇಜ್ರಿವಾಲ್‌ ಮುಖಕ್ಕೆ ಮಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೆಹಲಿ ಸಿಎಂ ಕೇಜ್ರಿವಾಲ್‌ ಮುಖಕ್ಕೆ ಮಸಿ

ನವದೆಹಲಿ (ಪಿಟಿಐ): ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಭಾಷಣ ಮಾಡುತ್ತಿದ್ದಾಗ ಮಹಿಳೆಯೊಬ್ಬರು ಅವರ ಮುಖಕ್ಕೆ ಮಸಿ ಎರಚಿದ ಘಟನೆ ಭಾನುವಾರ ನಡೆದಿದೆ.ಇಲ್ಲಿನ ಛತ್ರಸಾಲ ಮೈದಾನದಲ್ಲಿ ಸಮ ಮತ್ತು ಬೆಸ ಸಂಖ್ಯೆ ಯೋಜನೆಯ ಯಶಸ್ವಿ ಕುರಿತು ಕಾರ್ಯಕ್ರಮ ಆಯೋಜಿಸಲಾಗಿತ್ತು. ಇಲ್ಲಿ ಭಾಷಣ ಮಾಡುತ್ತಿದ್ದಾಗ ಈ ಘಟನೆ ಜರುಗಿದೆ.

ಬಿಗಿ ಬಂದೋಬಸ್ತ್‌ ನಡುವೆಯೂ ಆ ಮಹಿಳೆ ಕೇಜ್ರಿವಾಲ್‌ ಭಾಷಣ ಮಾಡುತ್ತಿದ್ದ ವೇದಿಕೆಗೆ ತೆರಳಿ ಮಸಿ ಎರಚಿದ್ದಾರೆ.ಸ್ಥಳದಲ್ಲೇ ಇದ್ದ ಪೊಲೀಸರು ಕೂಡಲೇ ಆ ಮಹಿಳೆಯನ್ನು ಬಂಧಿಸಿದ್ದಾರೆ. ಆ ಮಹಿಳೆಯ ಬಗ್ಗೆ ಪೊಲೀಸರು ಯಾವುದೇ ಮಾಹಿತಿ ನೀಡಿಲ್ಲ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.