ಗುರುವಾರ , ಮೇ 19, 2022
20 °C

ದೆಹಲಿ ಸ್ಫೋಟ ಪ್ರಕರಣ: 3 ಮೊಬೈಲ್ ವಶ...

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜಮ್ಮು (ಪಿಟಿಐ): ದೆಹಲಿ ಹೈಕೋರ್ಟ್‌ನ ಆವರಣದಲ್ಲಿ ಸಂಭವಿಸಿದ ಬಾಂಬ್ ಸ್ಫೋಟದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್‌ಐಎ) ಜಮ್ಮುವಿನಲ್ಲಿ ಪ್ರಕರಣದ ಪ್ರಮುಖ ಆರೋಪಿಯಾದ ವೈದ್ಯಕೀಯ ವಿದ್ಯಾರ್ಥಿಯ ಮೂರು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದು, ಪ್ರಕರಣದ ತನಿಖೆಯಲ್ಲಿ ಇದು ಮಹತ್ವದ ಬೆಳವಣಿಗೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.ಎನ್‌ಐಎಯ ಅಧಿಕಾರಿಗಳು ಮಂಗಳವಾರ ಸಂಜೆ ವಿಶೇಷ ವಿಮಾನದಲ್ಲಿ ಜಮ್ಮುವಿಗೆ ತೆರಳಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಪ್ರಮುಖ ಆರೋಪಿ ಬಾಂಗ್ಲಾ ಮೂಲದ ಯುನಾನಿ ವೈದ್ಯಕೀಯ ವಿದ್ಯಾರ್ಥಿ ವಸೀಮ್ ಅಹಮದ್‌ನ ಮನೆಯಿಂದ ಎರಡು ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಕಿಶ್‌ತ್ವಾರ್‌ನಲ್ಲಿ ಮತ್ತೊಂದು ಮೊಬೈಲ್ ಹಾಗೂ ಕೆಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ಹೇಳಿವೆ.ಅಹಮದ್ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಶಂಕಿತ ಕಾರ್ಯಕರ್ತ ಜುನೈದ್ ಅಕ್ರಮ್,   ಸೆಪ್ಟೆಂಬರ್ 7ರಂದು ನಡೆದ ಈ ಸ್ಫೋಟ ಪ್ರಕರಣದ ಪ್ರಮುಖ ರೂವಾರಿಗಳು ಎಂದು ಹೇಳಲಾಗಿದೆ.ಈ ಕೃತ್ಯವನ್ನು ಪಾಕಿಸ್ತಾನ ಮೂಲದ ಉಗ್ರ ಸಂಘಟನೆಯಾದ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆ ನಡೆಸಿದೆ ಎಂದು ಇದುವರೆಗೆ ನಡೆಸಿರುವ ತನಿಖೆಯಿಂದ ದೊರೆತಿರುವ ಮಾಹಿತಿಗಳ ಆಧಾರದಲ್ಲಿ ತನಿಖಾಧಿಕಾರಿಗಳು ಶಂಕಿಸಿದ್ದಾರೆ.ಈ ಸ್ಫೋಟ ಪ್ರಕರಣದ ಹಿಂದೆ ಹರ್ಕತ್-ಉಲ್-ಜೆಹಾದ್-ಇಸ್ಲಾಮಿ (ಹುಜಿ) ಸಂಘಟನೆಯ ಕೈವಾಡ ಇದೆ ಎಂದು ಈ ಮೊದಲು ಹೇಳಲಾಗಿತ್ತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.