ಬೆಂಗಳೂರು: `ಚಿತ್ರನಟ ಮೋಹನ್ಬಾಬು ನಿರ್ದೇಶನದ `ದೇನಿಕೈನಾ ರೆಡಿ~ ತೆಲುಗು ಚಲನಚಿತ್ರದಲ್ಲಿ ಬ್ರಾಹ್ಮಣ ಸಮುದಾಯದ ಬಗ್ಗೆ ಅವಹೇಳನ ಮಾಡಲಾಗಿದ್ದು, ಈ ಚಿತ್ರದ ಪ್ರದರ್ಶನವನ್ನು ರಾಜ್ಯದಾದ್ಯಂತ ರದ್ದುಗೊಳಿಸಬೇಕು~ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಆಗ್ರಹಿಸಿದೆ.

`ಚಿತ್ರದಲ್ಲಿ ಬ್ರಾಹ್ಮಣ ಸಮುದಾಯವನ್ನು ಅವಹೇಳನ ಮಾಡುವ ಅನೇಕ ಸಂಭಾಷಣೆಗಳು, ದೃಶ್ಯಗಳು ಇವೆ. ಅಲ್ಲದೆ ಚಿತ್ರದಲ್ಲಿ ಬ್ರಾಹ್ಮಣ್ಯ ಮಹಿಳೆಯನ್ನು ಅಸಭ್ಯವಾಗಿ ಚಿತ್ರಿಸಿ, ಅವಹೇಳನ ಮಾಡಿರುವುದು ಖಂಡನಾರ್ಹ. ಈ ಬಗ್ಗೆ ಆಂಧ್ರಪ್ರದೇಶದಲ್ಲಿ ಬ್ರಾಹ್ಮಣರು ಪ್ರತಿಭಟನೆ ನಡೆಸಿದಾಗ ನಿರ್ಮಾಪಕರು ಪ್ರತಿಭಟನಾಕಾರರ ಮೇಲೆ ಹಲ್ಲೆ ನಡೆಸಿದ್ದಾರೆ~ ಎಂದು ಮಹಾಸಭಾ ದೂರಿದೆ.

`ಚಿತ್ರದ ಪ್ರದರ್ಶನ ರದ್ದುಗೊಳಿಸಲು ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿಯು ಕೂಡಲೇ ಕ್ರಮ ಕೈಗೊಳ್ಳಬೇಕು. ಚಿತ್ರದ ಪ್ರದರ್ಶನ ಮುಂದುವರಿಸಿದ್ದಲ್ಲಿ ಮಹಾಸಭಾ ವತಿಯಿಂದ ಪ್ರತಿಭಟನೆ ನಡೆಸಲಾಗುವುದು~ ಎಂದು ಮಹಾಸಭಾ ಪ್ರಕಟಣೆಯಲ್ಲಿ ಎಚ್ಚರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.