ಸೋಮವಾರ, ಮೇ 10, 2021
28 °C

ದೇವದಾಸಿ ಪದ್ಧತಿ ಕೊನೆಗಾಣಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜ್ಯದ 14 ಜಿಲ್ಲೆಗಳಲ್ಲಿ ಸರ್ಕಾರ ದೇವದಾಸಿ (ಪ್ರ, ವಾ. ಮಾ. 23)ಯರನ್ನು ಗುರುತಿಸಿದೆ. ಈ ಅನಿಷ್ಟ ಪದ್ಧತಿಯನ್ನು ಸಂಪೂರ್ಣವಾಗಿ ಕೊನೆಗೊಳಿಸಲು ಸಾಧ್ಯವಾಗಿಲ್ಲ.  ರಾಜ್ಯದಲ್ಲಿ 46 ದೇವದಾಸಿ ಪ್ರಕರಣಗಳು ದಾಖಲಾಗಿವೆ.

 

ಒಬ್ಬರಿಗೆ ಮಾತ್ರ ಶಿಕ್ಷೆಯಾಗಿದೆ. ಈ ಪದ್ಧತಿಯನ್ನು ಕೊನೆಗಾಣಿಸಲು ಸರ್ಕಾರಕ್ಕೆ ಆಸಕ್ತಿ ಇದ್ದಂತಿಲ್ಲ.  ದೇವದಾಸಿಯರಿಗೆ ಉದ್ಯೋಗ, ಅವರ ಮಕ್ಕಳಿಗೆ ಶಿಕ್ಷಣ ಹಾಗೂ ಆರ್ಥಿಕ ಸವಲತ್ತು ಒದಗಿಸಬೇಕು.ಈಗಾಗಲೇ ಸ್ಥಾಪಿತವಾಗಿರುವ `ದೇವದಾಸಿ ಪುನರ್ ವಸತಿ ಕೇಂದ್ರ~ಗಳು ಇನ್ನೂ ಹೆಚ್ಚು ಕ್ರಿಯಾಶೀಲವಾಗಿ ಕೆಲಸ ಮಾಡಬೇಕಾಗಿದೆ. ಸರ್ಕಾರ ಮಠ ಮಾನ್ಯಗಳಿಗೆ ಅನುದಾನ ಕೊಡುವುದನ್ನು ನಿಲ್ಲಿಸಿ ಆ ಹಣವನ್ನು ದೇವದಾಸಿಯರ ಪುನರ್ವಸತಿಗೆ ಉಪಯೋಗಿಸಬೇಕು. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.