ಭಾನುವಾರ, ಏಪ್ರಿಲ್ 11, 2021
30 °C

ದೇವನಹಳ್ಳಿ: ಹೋಮಿಯೋಪತಿ ಚಿಕಿತ್ಸಾ ಶಿಬಿರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 ದೇವನಹಳ್ಳಿ: ಹೋಮಿಯೋಪತಿ ಚಿಕಿತ್ಸೆಯಿಂದ ಎಲ್ಲಾ ರೋಗಗಳನ್ನು ಗುಣಪಡಿಸಲು ಸಾಧ್ಯವಿಲ್ಲ ಎಂದು ಹೋಮಿಯೋಪತಿ ವೈದ್ಯರಾದ ಅನುರಾಧ •ತಿಳಿಸಿದರು.ಇಲ್ಲಿನ ಲಯನ್ಸ್ ಭವನದಲ್ಲಿ ಲಯನ್ಸ್ ಮತ್ತು ಲಯನೆಸ್ ಸಂಸ್ಥೆ ಹಮ್ಮಿಕೊಂಡಿದ್ದ ಉಚಿತ ಹೋಮಿಯೋಪತಿ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಮಾತನಾಡಿದರು.ರೋಗಗಳನ್ನು ಗುಣಪಡಿಸಲು ಹಲವು ಚಿಕಿತ್ಸಾ ವಿಧಾನಗಳಿವೆ. ರೋಗಗಳ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಯಾವುದೇ ರೋಗದ ಲಕ್ಷಣಗಳು ಕಾಣಸಿಕೊಂಡಲ್ಲಿ ಪ್ರಾಥಮಿಕ ಹಂತದಲ್ಲೇ ತಜ್ಞ ವೈದ್ಯರ ಸಲಹೆ ಪಡೆಯುವುದು ಅವಶ್ಯ ಎಂದು ತಿಳಿಸಿದರು.ಲಯನ್ಸ್ ಅಧ್ಯಕ್ಷ ವೈ.ಕೆ.ಚಂದ್ರಶೇಖರ್ ಅಧ್ಯಕ್ಷತೆವಹಿಸಿ ಮಾತನಾಡಿ, ಗ್ರಾಮೀಣ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಈಗಾಗಲೇ 60 ಉಚಿತ ಹೋಮಿಯೋಪತಿ ಚಿಕಿತ್ಸಾ ಶಿಬಿರ ನಡೆಸಲಾಗಿದೆ. ಪ್ರತಿ ತಿಂಗಳ ಮೂರನೇ ಭಾನುವಾರ ಉಚಿತ ಹೋಮಿಯೋಪತಿ ಚಿಕಿತ್ಸೆ ನೀಡಲಾಗುತ್ತಿದ್ದು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೋರಿದರು.ಲಯನೆಸ್ ಅಧ್ಯಕ್ಷೆ ಗೋಮತಿ ರಮೇಶ್, ಮಾಜಿ ಅಧ್ಯಕ್ಷರಾದ ವೈ.ಸಿ.ಕೃಪಾಕರ್, ರಮೇಶ್, ಪಶುವೈದ್ಯ ಮುನಿವೆಂಕಟಪ್ಪ ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.